ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅವಿಶ್ವಾಸ ಮಂಡಿಸಲು ಅವಕಾಶ ಕೋರಿ ವಿಧಾನಸಭೆ ಕಾರ್ಯದರ್ಶಿಗೆ ಪತ್ರ ಸಲ್ಲಿಸಿದರು.
ಖಾಸಗಿ ಹೋಟೆಲ್ ನಲ್ಲಿ ಪ್ರತಿಪಕ್ಷಗಳ ಸಭೆ ವೇಳೆ ವಿಧಾನಸಭೆ ಸ್ವೀಕರ್ ಯು.ಟಿ ಖಾದರ್ ಭೇಟಿ ನೀಡಿದ್ದನ್ನು ವಿರೋಧಿಸಿ ಸ್ಪೀಕರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯಕ್ಕೆ ನೋಟಿಸ್ ನೀಡಿವೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನೋಟಿಸ್‌ಗೆ ಸಹಿ ಹಾಕಿದ್ದಾರೆ. ಸ್ಪೀಕರ್ ಎಂಬುವುದು ಸ್ಥಾನ ಸಾಂವಿಧಾನಿಕವಾಗಿದ್ದು, ಇತರೆ ಯಾವುದೇ ಪಕ್ಷಗಳೊಂದಿಗೆ ಗುರುತಿಸಕೊಳ್ಳುವಂತಿಲ್ಲ. ಆದರೆ ವಿಧಾನಸಭೆಯ ಎಲ್ಲಾ ಸದಸ್ಯರಿಂದ ಆಯ್ಕೆಯಾದ ಸ್ಪೀಕರ್ ಸದನದ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಹಾಗಾಗಿ ಅಸ್ಪೀಕರ್ ಯ.ಟಿ. ಖಾದರ್ ರನ್ನ ಪದಚ್ಯುತಗೊಳಿಸಬೇಕು ಎಂದು ಬಿಜೆಪಿ ಉಲ್ಲೇಖಿಸಿದೆ. 169 ರ ಅಡಿಯಲ್ಲಿ ಸದನದಲ್ಲಿ ನಿರ್ಣಯವನ್ನು ತರಲು ಸಮಯ ನೀಡುವಂತೆ ನಾವು ವಿನಂತಿಸುತ್ತೇವೆ ಎಂದು ವಿಧಾನಸಭೆ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ. ಯು.ಟಿ ಖಾದರ್ ಈ ವರ್ಷ ಮೇ 24 ರಂದು ಸ್ಪೀಕರ್ ಆಗಿ ಸರ್ವಾನುಮತದಿಂದ ಆಯ್ಕೆಯಾದರು. ಪ್ರತಿಪಕ್ಷಗಳ ವಿರೋಧದ ನಡುವೆಯೂ ಅಧಿವೇಶನ ಮುಂದುವರಿಸಿದ್ದಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಖಾದರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.