ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತ ಕಾಡಾನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕು ಯಸಳೂರು ಬಳಿ ಕಾರ್ಯಾಚರಣೆ ವೇಳೆ ನಡೆದ ಕಾಳಗದಲ್ಲಿ ವೀರಮರಣವಪ್ಪಿದೆ.
ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಒಂಟಿ ಸಲಗ ದಾಳಿ ಮಾಡಿದಾಗ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಗುಂಡು ಹಾರಿಸಿದಾಗ ಅದು ಅರ್ಜುನನ ಕಾಲಿಗೆ ತಗುಲಿದೆ ಎಂದು ಹೇಳಲಾಗುತ್ತಿದೆ. ಗುಂಡು ತಗುಲಿದ ಬಗ್ಗೆ ಕಾರ್ಯಾಚರಣೆ ವೇಳೆ ಸ್ಥಳದಲ್ಲಿದ್ದ ಆನೆ ಮಾವುತರೊಬ್ಭರ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ಕಾರ್ಯಾಚರಣೆ ವೇಳೆ ಅರಿವಳಿಕೆ ಇಂಜೆಕ್ಷನ್ ನೀಡಲಾಯಿತು. ಅದು ಗುರಿ ತಪ್ಪಿ ಪ್ರಶಾಂತ್ ಎಂಬ ಸಾಕಾನೆಗೆ ಬಿತ್ತು.
ನಂತರ ಇನ್ನೊಂದು ಇಂಜೆಕ್ಷನ್ ನೀಡಿ ಪ್ರಶಾಂತ್ ಆನೆಯನ್ನು ಸುಧಾರಿಸಲಾಯಿತು. ಆ ಮೇಲೆ ಅರ್ಜುನ ಆನೆ ಮೊದಲ ಬಾರಿಗೆ ಕಾಡಾನೆ ಮೇಲೆ ದಾಳಿ ಮಾಡಿತು. ಕಾಡಾನೆ ಸಾಕಾನೆ ಕಾಳಗದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಕೋವಿನಿಂದ ಗುಂಡು ಹಾರಿಸಿದರು. ಆಗ ಅರ್ಜುನನ ಕಾಲಿಗೆ ಗುಂಡು ತಗುಲಿತು. ಗುಂಡು ಬೀಳುತ್ತಲೇ ಅರ್ಜುನ ಬಲ ಕಳೆದುಕೊಂಡ. ದೊಡ್ಡ ಆನೆ ಆದ್ದರಿಂದ ಸುತ್ತಮುತ್ತಲಿನ ಮರಗಳನ್ನು ಬೀಳಿಸಿದ.
ನಾವು ಆನೆ ಮೇಲಿಂದ ಇಳಿದು ಓಡಿದೆವು. ಕಾಲಿಗೆ ಗುಂಡು ಬಿದ್ದ ನಂತರ ಅರ್ಜುನನಿಗೆ ನಡೆದಾಡಲು ಆಗಲಿಲ್ಲ. ಇದೇ ವೇಳೆ ಕಾಡಾನೆ ಸಾಕಾನೆ ಅರ್ಜುನನ ಮೇಲೆ ಹಠಾತ್ ದಾಳಿ ಮಾಡಿತು ಎಂದು ಸ್ಥಳೀಯರೊಬ್ಬರು ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ .ಆಗಿದ್ದು ಇದರಲ್ಲಿ ದಸರಾ ಆನೆ ಅರ್ಜುನನ ಸಾವಿನ ಸತ್ಯ ಬಯಲಾಗಿದೆ.
ಅರ್ಜುನನ ಮೇಲೆ ಕಾಡಾನೆ ದಾಳಿ ಮಾಡುವ ಮುನ್ನವೇ ಅರ್ಜುನನ ಕಾಲಿಗೆ ಗುಂಡು ತಗುಲಿತ್ತು. ಈ ಕಾರಣದಿಂದ ವೀಕ್ ಆಗಿದ್ದ ಅರ್ಜುನನನ್ನು ನಡೆದಾಡೋದಕ್ಕೆ ಆಗಲಿಲ್ಲ. ಇದೇ ವೇಳೆ ಒಂಟಿ ಸಲಗ ದಾಳಿ ಮಾಡಿದ್ದರಿಂದ ಸಾವಾಗಿದೆ ಎಂದು ಸ್ಥಳೀಯರೊಬ್ಬರು ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ ಆಗಿದೆ.
ವೀರ ಮರಣ ಹೊಂದಿದ ಅರ್ಜುನನಿಗೆ ಇಂದು ಬೆಳಿಗ್ಗೆ 11 ಗಂಟೆ ಬಳಿಕ ಸಕಲ ಸರ್ಕಾರಿ ಗೌರವ ಹಾಗು ರಾಜ ಮರ್ಯಾದೆಯೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿಯಾಗಿದೆ.