ಬೆಂಗಳೂರು : ಡಿಸೆಂಬರ್ 2 ಶನಿವಾರ (ನಾಳೆ) ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಡಿಸಿಎಂ ಡಿಕೆಶಿ ಜನಸಂಪರ್ಕ ಸಭೆ ನಡೆಸಲಿದ್ದಾರೆ.
ನಾಳೆ ಬೆಳಗ್ಗೆ 10.30 ರಿಂದ ಸಂಜೆ 5.00 ಗಂಟೆವರೆಗೆ ಕನಕಪುರ ಜಿಲ್ಲೆಯಲ್ಲಿ ಡಿಸಿಎಂ ಡಿಕೆಶಿವಕುಮಾರ್ ನೇತೃತ್ವದಲ್ಲಿ ಜನಸಂಪರ್ಕ ಸಭೆ ಆಯೋಜನೆ ಮಾಡಿದ್ದಾರೆ. ಸಭೆಯಲ್ಲಿ ಜನರ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಲಿದ್ದಾರೆ. ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವುದು ಉದ್ದೇಶವನ್ನು ಹೊಂದಿದ್ದಾರೆ. ಜನ ಸಂಪರ್ಕ ಸಭೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು, ಜನರ ಸಮಸ್ಯೆಗಳ ಪರಿಹಾರವನ್ನು ನೀಡುವ ಸಾಧ್ಯತೆಯಿದೆ.