ಬೆಂಗಳೂರು : ಸರ್ಕಾರದ ಘೋಷಣೆಯಿಂದ ಸಮಾಧಾನಗೊಳ್ಳದ ಅತಿಥಿ ಉಪನ್ಯಾಸಕರು ತಮ್ಮ ಹೋರಾಟ ಮುಂದುವರಿಸಿದ್ದಾರೆ.
ಇಂದು ತುಮಕೂರಿನ ಸಿದ್ದಗಂಗಾ ಮಠದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ವರೆಗೆ ಪಾದಯಾತ್ರೆ ಆರಂಭಿಸಿದ್ದಾರೆ. ಸಿದ್ದಗಂಗಾ ಶ್ರೀ ಸಿದ್ದಲಿಂಗಸ್ವಾಮಿಗಳು ಪಾದಯಾತ್ರೆಗೆ ಚಾಲನೆ ಕೊಟ್ಟು ಹೆಜ್ಜೆ ಹಾಕಿದ್ದಾರೆ.
ತುಮಕೂರು ಜಿಲ್ಲೆಯ ಉಪನ್ಯಾಸಕರು ಸೇರಿದಂತೆ ಇತರೆ ಜಿಲ್ಲೆಗಳಿಂದ ಬಂದ ಸಾವಿರಾರು ಉಪನ್ಯಾಸಕರು ಬೆಂಗಳೂರು ಕಡೆ ಹೆಜ್ಜೆ ಹಾಕಿದರು.
ಈ ವೇಳೆ ಮಾತನಾಡಿದ ಸಿದ್ಧಗಂಗಾ ಮಠದ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಅತಿಥಿ ಉಪನ್ಯಾಸಕರ ಬೇಡಿಕೆ ನ್ಯಾಯಯುತವಾಗಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕಿದೆ ಎಂದರು.