ಹುಬ್ಬಳ್ಳಿ : ಬರಗಾಲ ವಿಚಾರದಲ್ಲಿ ನಮಗೆ ಯಾವ ಕನಫ್ಯೂಸನ್ ಇಲ್ಲ. ರೈತರನ್ನು ಕನಫ್ಯೂಸ್ ಮಾಡಿದ್ದು ಕೇಂದ್ರ ಸರ್ಕಾರ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾವು ನಿನ್ನೆ ಬರಗಾಲ ಘೋಷಣೆ ಮಾಡಿದ್ದೇವೆ.
195 ತಾಲೂಕು ಬರಗಾಲ ಎಂದು ಘೋಷಣೆ ಮಾಡಿದ್ದೇವೆ. ಇದಕ್ಕೆ ಒಂದುವರೆ ತಿಂಗಳಿಂದ ಕೆಲಸ ಮಾಡಿ ಬರಗಾಲ ಘೋಷಣೆ ಮಾಡಿದ್ದೇವೆ. ಕೇಂದ್ರ ಸರ್ಕಾರದ ಮಾನದಂಡಗಳಿಕೆ ಕೆಲ ತಾಲೂಕುಗಳು ಬರುತ್ತಿಲ್ಲ ಎಂದರು.
ನಮಗೆ ಸರಿ ಮಾಡೋಕೆ ಯಾವ ಪ್ರತಿಷ್ಠೆ ಇಲ್ಲ. ಕೇಂದ್ರ ಸರ್ಕಾರದ ನಾರ್ಮ್ಸ್ ಪ್ರಕಾರ ನಾವು ಮಾಡಿದ್ದೇವೆ. ಇದೇ ಅಂತಿಮ ಅಲ್ಲ, ತಿಂಗಳ ಕೊನೆಯಲ್ಲಿ ಮತ್ತೊಮ್ಮೆ ಸಮೀಕ್ಷೆ ಮಾಡುತ್ತೇವೆ ಎಂದು ಅವರು ಹೇಳಿದರು. ಜುಲೈ 1 ನೇ ವಾರದಲ್ಲಿ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ರು. ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಬರಗಾಲ ಘೋಷಣೆ ಮಾಡೋದ ಕಷ್ಟ. ಅಂತಹ ಸವಾಲಿನ ಮಧ್ಯೆಯೂ ನಾವು ಘೋಷಣೆ ಮಾಡಿದ್ದೇವೆ.