ಬೆಂಗಳೂರು: ಇಂಧನ ಸಚಿವ ಕೆ.ಜೆ.ಜಾರ್ಜ್ ಕದ್ರಾ ಅಣೆಕಟ್ಟು ಜಲಾಶಯದಲ್ಲಿ ತೇಲುವ ಸೌರ ವಿದ್ಯುತ್ ಸ್ಥಾವರ ಸ್ಥಾಪನೆ ವಿಚಾರವಾಗಿ ಇಂದು ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಾಯಿತು.
ಇಂಧನ ಸಚಿವ ಕೆ.ಜೆ.ಜಾರ್ಜ್ ಕದ್ರಾ ಅಣೆಕಟ್ಟು ಜಲಾಶಯದಲ್ಲಿ ತೇಲುವ ಸೌರ ವಿದ್ಯುತ್ ಸ್ಥಾವರ ಸ್ಥಾಪನೆ ಮತ್ತು ಬೆಂಗಳೂರು ನಗರದ ಬಳಕೆಗಾಗಿ ವಿದ್ಯುತ್ ಪ್ರಸರಣ ಮೂಲಸೌಕರ್ಯಗಳ ಸಾಮರ್ಥ್ಯವನ್ನು ಹೆಚ್ಚಿಸುವುದು ಸೇರಿದಂತೆ ಪ್ರಮುಖ ಯೋಜನೆಗಳ ಕಾರ್ಯಸಾಧ್ಯತೆ ಮತ್ತು ಅನುಷ್ಠಾನದ ಕುರಿತು ಚರ್ಚಿಸಲು ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಇಂಧನ ಸಚಿವಾಲಯದ ಅಧಿಕಾರಿಗಳು ಮತ್ತು ತಾಂತ್ರಿಕ ತಜ್ಞರು ಈ ಸಭೆಯಲ್ಲಿ ಭಾಗವಹಿಸಿದರು.