ಬೆಂಗಳೂರು : ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಬಂಧಿತ ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಇಂದು ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆರೋಪಿಗಳ ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಹಲಸೂರಿನ RBANMS ಕಾಲೇಜು ಮೈದಾನದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು ಈ ಸಂದರರ್ಭದಲ್ಲಿ ಬಂಧಿತರ ಕುಟುಂಬಸ್ಥರಿಂದ ಡಿಕೆ ಶಿವಕುಮಾರ್ ಮನವಿ ಸ್ವೀಕರಿಸಿದರು.
ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಕಾನೂನಿನ ಅಡಿಯಲ್ಲಿ ಏಕಾಏಕಿ ಹೇಳಲು ಆಗುವುದಿಲ್ಲ. ಲೀಗಲ್ ಆಗಿ ಬಿಜೆಪಿ ಸರ್ಕಾರ ಕೆಲವು ಸೆಕ್ಷನ್ ಪ್ರಯೋಗ ಮಾಡಿದ್ದಾರೆ. ಅವರಿಗೆ ಬಹಳ ಅನ್ಯಾಯವಾಗಿದೆ, ಜೈಲಿಂದ ಬಿಡುಗಡೆಯಾಗಲು ಆಗುತ್ತಿಲ್ಲ. ಕಾನೂನಿನ ಅಡಿಯಲ್ಲಿ ನಾವು ಅವರಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದರು.