ಬೆಂಗಳೂರು ; ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಕೇಸ್ ವಿಚಾರವಾಗಿ ಬಿಜೆಪಿ ಶಾಸಕ ಮುನಿರತ್ನ ಹೆಸರು ಬಂದ ಬೆನ್ನಲ್ಲೆ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮಾಧ್ಯಮದೊಂದಿಗೆ ಮಾತನಾಡಿ,ಮನೆ ಮುಂದೆ ನಡೆಯುವ ಅಪಘಾತವನ್ನೂ ನನ್ನ ತಲೆಗೆ ಕಟ್ಟುವ ಕೆಲಸ ಆಗುತ್ತಿದೆ.
ಈಗ ಪ್ರತಿಮಾ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ನಾನು ಮಾತನಾಡುವುದು ಸರಿಯಲ್ಲ, ಸೂಕ್ತವೂ ಅಲ್ಲ. ತನಿಖೆ ಮುಗಿದ ಮೇಲೆ ನಾನೇ ಮಾತನಾಡುತ್ತೇನೆ. ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಲೋಕಸಭೆ ಚುನಾವಣೆ ಮುಗಿಯುವ ತನಕ ಹೊರಗೆ ಇರಬಾರದು ಎಂದು ನನ್ನನ್ನು ತಿಹಾರ್ ಜೈಲಿಗೆ ಕಳಿಸಬೇಕು ಪ್ರಯತ್ನ ಮಾಡುತ್ತಿದ್ದಾರೆ ಎಂದಿದ್ದಾರೆ..