Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political NewsState News

ಈ ಮೈತ್ರಿ ಬಿಜೆಪಿಗೆ ಅಥವಾ ಜೆಡಿಎಸ್​ಗೆ ಬೇಕಿತ್ತಾ?

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್​ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಈ ಮೈತ್ರಿ ಬಿಜೆಪಿಗೆ ಬೇಕಿತ್ತಾ ಅಥವಾ ಜೆಡಿಎಸ್​ಗೆ ಬೇಕಿತ್ತಾ? ಎಂದು ಬೆಂಗಳೂರಿನಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರಶ್ನೆ ಮಾಡಿದ್ದಾರೆ. ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಅನ್ನೋದು ತಪ್ಪು. ಎಲ್ಲಾ ಜಿಲ್ಲೆಯವರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.

ನಗರದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಜನತಾದಳ ಪಕ್ಷದ ಸಿದ್ಧಾಂತವನ್ನು ಬಿಜೆಪಿಯವರು ಒಪ್ಪಿದ್ದಾರಾ? ಬಿಜೆಪಿ ಸಿದ್ಧಾಂತವನ್ನ ಜೆಡಿಎಸ್‌ (JDS) ಒಪ್ಪಿದೆಯಾ ಎಂಬುದನ್ನು ತಿಳಿಸಬೇಕು. ರಾಷ್ಟ್ರಮಟ್ಟದಲ್ಲಿ ಮೈತ್ರಿ ಮಾಡಿಕೊಳ್ಳುವುದಕ್ಕೆ ನಮಗೆ ಶಕ್ತಿ ಇಲ್ಲ. ಈ ಮೈತ್ರಿ ಕರ್ನಾಟಕಕ್ಕೆ ಮಾತ್ರ ಸೀಮಿತ ಆಗುತ್ತಿದೆ. ದೇವೇಗೌಡರು ಎಲ್ಲರನ್ನೂ ಕರೆದು ಅಭಿಪ್ರಾಯ ಪಡೆಯುವುದು ಸೂಕ್ತ ಎಂದು ಸಿ.ಎಂ.ಇಬ್ರಾಹಿಂ ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಜೆಡಿಎಎಸ್​ ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕುರಿತು ಅಸಮಧಾನ ಉಂಟಾಗಿರುವುದು ಖಂಡಿತ ಎಂದು ಅವರು ಹೇಳಿದ್ದಾರೆ. ಬಿಜೆಪಿ ‌ಸಿದ್ಧಾಂತ ಒಪ್ಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ಯಾ ಅಥವಾ ಜೆಡಿಎಸ್ ಸಿದ್ಧಾಂತವನ್ನ ಬಿಜೆಪಿ ಒಪ್ಪಿದ್ಯಾ..? ಜೆಡಿಎಸ್​ ಗೆ ಬಿಜೆಪಿ ಜೊತೆ ಮೈತ್ರಿ ಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ.

ಯಾರ ಸಿದ್ದಾಂತವನ್ನು ಯಾರು ಒಪ್ದಿದ್ದಾರೆ, ನಾನು ವಿಷಕಂಠನಂತೆ ಇದ್ದೇನೆ 16ನೇ ತಾರೀಖಿನಂದು ಈ ಕುರಿತು ಸಭೆ ನಡೆಸಿ ಮಾತನಾಡುತ್ತೇನೆ ಎಂದು ಅವರು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!