Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political NewsState News

ಜನರ ಓಡಾಟಕ್ಕೆ ತೊಂದ್ರೆ ಆಗದಂತೆ ವ್ಯಾಪಾರ ಮಾಡಿದ್ರೆ ತೊಂದ್ರೆಯಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು : ಫುಟ್ ಪಾತ್ ವ್ಯಾಪಾರಿಗಳು ಲೈಸೆನ್ಸ್ ಪಡೆದು ಜನರ ಓಡಾಟಕ್ಕೆ ತೊಂದರೆ ಆಗದಂತೆ ವ್ಯಾಪಾರ ಮಾಡಿದರೆ ತೊಂದರೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

 ಬೆಂಗಳೂರಿನ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ಮಾಧ್ಯಮದೊಂದಿಗೆ ಮಾತನಾಡಿ, ಫುಟ್ ಪಾತ್ ವ್ಯಾಪಾರಿಗಳ ಸಮಸ್ಯೆ ನನ್ನ ಗಮನದಲ್ಲೂ ಇದೆ. ಅವರು ಎರಡು ಮೂರು ಬಾರಿ ನನ್ನನ್ನೂ ಭೇಟಿ‌ ಮಾಡಿದ್ದರು. ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಸರಿಪಡಿಸಬೇಕು. ಫುಟ್ ಪಾತ್​ಗಳು ಜನರ ಓಡಾಟಕ್ಕೆ ಮುಕ್ತವಾಗಿರಬೇಕು. ಹೈ ಕೋರ್ಟ್ ಆರ್ಡರ್ ಇದೆ. ಅದನ್ನ ಪಾಲಿಸಬೇಕು.

ಫುಟ್ ಪಾತ್ ವ್ಯಾಪಾರಿಗಳು ಲೈಸೆನ್ಸ್ ಪಡೆದು ಜನರ ಓಡಾಟಕ್ಕೆ ತೊಂದರೆ ಆಗದ ರೀತಿಯಲ್ಲಿ ತಳ್ಳುಗಾಡಿ ಎಲ್ಲಾ ಹಾಕಿಕೊಂಡು ವ್ಯಾಪಾರ ಮಾಡಿದರೆ ತೊಂದರೆ ಇಲ್ಲ. ಫುಟ್ ಪಾತ್ ಓಡಾಟಕ್ಕೆ ತೊಂದರೆ ಆದಾಗ ನಾಗರಿಕರಿಂದ ನಮಗೂ ದೂರುಗಳು ಬಂದಿವೆ. ಕೋರ್ಟ್ ನಿರ್ದೆಶನ ಸಹ ಇದೆ. ಅದನ್ನ ನಾವು ಪಾಲಿಸಬೇಕು ಎಂದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!