Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಶಿಕ್ಷಣ ಸಚಿವ ಮಧು ಬಂಗಾರಪ್ಪರ ಕಾರು ಲಘು ಅಪಘಾತ, ಪ್ರಾಣಾಪಾಯದಿಂದ ಪಾರು

ತುಮಕೂರು : ತಾಲೂಕಿನ ನಂದಿಹಳ್ಳಿ ಬಳಿ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಕಾರು ಲಘು ಅಪಘಾತ ಸಂಭವಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದ್ದ ಲಘು ಕಾರು ಅಪಘಾತ ಎಂದು ತಿಳಿಯಲಾಗಿದೆ, ಚಲಿಸುತಿದ್ದ ರಾಜಸ್ಥಾನದ ಲಾರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಅವರ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.

ಶಿವಮೊಗ್ಗದಿಂದ ಬೆಂಗಳೂರಿಗೆ ಸಚಿವರು ಹೋಗುತಿದ್ದ‌‌ರು ಅಪಘಾತ ನಡೆದ ವೇಳೆ ಸಚಿವರು ಸೇರಿ ಮೂವರು ಕಾರಿನಲ್ಲಿ ಪ್ರಯಾಣಿಸುತಿದ್ದರು. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬಳಿಕ ಬದಲಿ ಕಾರು ವ್ಯವಸ್ಥೆ ಮಾಡಿಕೊಂಡು ಬೆಂಗಳೂರಿಗೆ ಪ್ರಯಾಣಿಸಿದ್ದಾರೆ. ಕ್ಯಾತಸಂದ್ರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ ಎಂದು ವರದಿಯಾಗಿದೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!