ಚಿಕ್ಕಬಳ್ಳಾಪುರ : ತಾಲೂಕಿನ ಕಳವಾರ ಗ್ರಾಮದ ಹೊರವಲಯದ ಚಾರಣಿಗರ ಸ್ವರ್ಗ ಸ್ಕಂಧಗಿರಿ ಬೆಟ್ಟದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಬೆಂಕಿ ಕಾಣಿಸಿಕೊಂಡಿದೆ.
ಯಾರೋ ದುಷ್ಕರ್ಮಿಗಳಿಂದ ಬೆಟ್ಟಕ್ಕೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ.
ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದಲೇ ಬೆಟ್ಟಕ್ಕೆ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಸ್ಕಂಧಗಿರಿ ಬೆಟ್ಟದಿಂದ ಲಕ್ಷಾಂತರ ರೂಪಾಯಿ ಆದಾಯ ಪಡೆಯುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿಗಳೇ ಬೆಂಕಿ ನಂದಿಸೋದಕ್ಕೂ ಮುಂದಾಗಿಲ್ಲ ಎಂದು ಸ್ಥಳೀಯ ಜನರು ಕಿಡಿಕಾರುತ್ತಿದ್ದಾರೆ.