Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಚಲಿಸುತ್ತಿದ್ದ KSRTC ಬಸ್ಸಿಗೆ ಬೆಂಕಿ ಅವಘಡ

ಚಾಮರಾಜನಗರ : ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಅರಣ್ಯದ ರಸ್ತೆಯಲ್ಲಿ ಯಳಂದೂರಿನಿಂದ ಬಿಳಿಗಿರಿ ರಂಗನ ಬೆಟ್ಟಕ್ಕೆ ಹೊರಟಿದ್ದ ಸರ್ಕಾರಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಈ ಬಸ್ಸಿನಲ್ಲಿ ಬರೊಬ್ಬರಿ  50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಚಾಲಕ ಹಾಗೂ ನಿರ್ವಾಹಕ ಬಸ್​ನಲ್ಲಿದ್ದ ಪ್ರಯಾಣಿಕರ ಸಹಾಯದಿಂದ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದಾರೆ. ಯಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!