Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political NewsState News

ಭ್ರೂಣ ಲಿಂಗ ಹತ್ಯೆ ಪ್ರಕರಣವನ್ನು ವಿಸ್ತೃತವಾಗಿ ತನಿಖೆ ಆಗಬೇಕು : ಸಚಿವ ದಿನೇಶ್ ಗುಂಡೂರಾವ್

ತುಮಕೂರು : ರಾಜ್ಯದಲ್ಲಿ ಹೆಣ್ಣು ಭ್ರೂಣ ಲಿಂಗ ಹತ್ಯೆ ಪ್ರಕರಣ ಭಾರೀ ಚರ್ಚೆಯಾಗುತ್ತಿದ್ದು, ಇದೀಗ ಈ ಪ್ರಕರಣವನ್ನು ವಿಸ್ತೃತವಾಗಿ ತನಿಖೆ ಆಗಬೇಕೆಂದು ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ಕೊರಟಗೆರೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಭ್ರೂಣ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸ್ ಇಲಾಖೆ ಹೆಚ್ಚಿನ ಕ್ರಮ ಕೈಗೊಳ್ಳುತ್ತಿದೆ. ಭ್ರೂಣ ಲಿಂಗ ಹತ್ಯೆ ಪ್ರಕರಣವನ್ನು ವಿಸ್ತೃತವಾಗಿ ತನಿಖೆ ಆಗಬೇಕೆಂದಿದ್ದೇನೆ .ಈಗಾಗಲೇ ಈ ಕೇಸನನ್ನು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್​ ಚರ್ಚಿಸಿ ಸಿಐಡಿಗೆ ವಹಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ

ಈ ಭ್ರೂಣ ಲಿಂಗ ಹತ್ಯೆ ತಡೆಗಟ್ಟಲು ಇಲಾಖೆ ಹೆಚ್ಚು ಗಮನ ಹರಿಸುತ್ತದೆ. ಪ್ರಕರಣ ಸಂಬಂಧ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!