Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!National & International News

ISRO ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಗೆ ಲಘು ಹೃದಯಾಘಾತ

ಬೆಂಗಳೂರು : ಖ್ಯಾತ ವಿಜ್ಞಾನಿಯಾದ, ಇಸ್ರೋ ಮಾಜಿ ಅಧ್ಯಕ್ಷರಾದ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದ್ದು, ಶ್ರೀಲಂಕಾದಲ್ಲಿದ್ದ ಅವರನ್ನು ಏರ್‌ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ.

ಹೌದು ಕ್ಯಾತ ವಿಜ್ಞಾನಿಯೂ, ಇಸ್ರೋದ ಮಾಜಿ ಅಧ್ಯಕ್ಷರೂ ಆದ ಕಸ್ತೂರಿ ರಂಗನ್ ಅವರು ಸುಮಾರು ಒಂದು ದಶಕದ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಹಾಗಾಗಿ ಕಸ್ತೂರಿ ರಂಗನ್ ಅವರಿಗೆ ಭಾರತ ಸರ್ಕಾರದಿಂದ ನೀಡಲಾಗುವ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ಕಸ್ತೂರಿ ರಂಗನ್ ಅವರು ಶ್ರೀಲಂಕಾಕ್ಕೆ ತೆರಳಿದ್ದರು, ಅಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅಲ್ಲದೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ. ಅಲ್ಲಿ ಖ್ಯಾತ ಹೃದಯತಜ್ಞ ಡಾ. ದೇವಿಶೆಟ್ಟಿ ಅವರು ಕಸ್ತೂರಿ ರಂಗನ್ ಅವರ ಆರೋಗ್ಯದ ಬಗ್ಗೆ ಸೂಕ್ಷ್ಮವಾಗಿ ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!