ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬೆರ್ಲುಸ್ಕೋನಿ (86) ಮಿಲನ್ ನ ಸ್ಯಾನ್ ರಾಫೆಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಇಟಲಿಯ ಮಾಧ್ಯಮಗಳು ವರದಿ ಮಾಡಿವೆ.
ಲೈಂಗಿಕ ಹಗರಣಗಳು ಮತ್ತು ಭ್ರಷ್ಟಾಚಾರದ ಆರೋಪಗಳಿಂದ ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಸಿಲ್ವಿಯೊ ಬೆರ್ಲುಸ್ಕೋನಿ ಏಪ್ರಿಲ್ನಲ್ಲಿ ದೀರ್ಘಕಾಲದ ಲ್ಯುಕೇಮಿಯಾ ಸಂಬಂಧಿಸಿದ ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಿಲನ್ನ ಸ್ಯಾನ್ ರಾಫೆಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ.