ಉಡುಪಿ : ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರು ಇಡುತ್ತಾರೆ, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ಪ್ರತಿಭಟನೆ ನಡೆಯುತ್ತಿದ್ದು , ಪ್ರತಿಭಟನೆ ಮೆರವಣಿಗೆ ವೇಳೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ಪ್ರತಿಭಟನೆ ನಡೆಯುತ್ತಿದ್ದು , ಪ್ರತಿಭಟನೆ ಮೆರವಣಿಗೆ ವೇಳೆ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿದ್ದಾರೆ. ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಕ್ಕಳಾಟ ಎಂದಿದ್ದಕ್ಕೆ ಶಾಸಕ ಯಶ್ಪಾಲ್ ಸುವರ್ಣ ಕಿಡಿಕಾರಿದ್ದಾರೆ . ಜಿ. ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟ. ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರು ಇಡುತ್ತಾರೆ. ಆದ್ದರಿಂದ ಈ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯ ಮಾಡಿದರು.