ಮೈಸೂರು : ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ಹೊಟ್ಟೆನೋವು ತಾಳಲಾರದೆ ಬಾಲಕಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ.
ಮೈಸೂರು ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವಣಕನಪುರ ಗ್ರಾಮದ ಗೀತಾ ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ಗುರುತಿಸಲಾಗಿದೆ .
ಅಲ್ಲದೇ ಆಕೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು, ಈಕೆ ವಿಪರೀತ ಹೊಟ್ಟೆ ನೋವು ತಾಳಲಾರದೆ ಬೇಸರಗೊಂಡು, ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿಯಲಾಗಿದೆ. ಸ್ಥಳಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.