ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರ ಆರೋಗ್ಯವನ್ನು ಕರೆ ಮಾಡುವ ಮೂಲಕ ರಾಜ್ಯಪಾಲ ಥಾವರಚಂದ್ ಗೆಹಲೋತ್ ( Thaawarchand Gehlot) ವಿಚಾರಿಸಿದ್ದಾರೆ.
ಅಲ್ಲದೇ ಆರೋಗ್ಯ ಚೆನ್ನಾಗಿ ನೋಡಿಕೊಳ್ಳುವಂತೆ ಮಾಜಿ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ತಿಳಿಸಿದ್ದಾರೆ. ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಕ್ಕೆ ರಾಜ್ಯಪಾಲರಿಗೆ ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.