ಬೆಂಗಳೂರು : ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶಕ್ಕೆ ಸರ್ಕಾರ ಭರ್ಜರಿ ಸಿದ್ಧತೆಯಲ್ಲಿ ತೊಡಗಿದೆ. ಸಮಾವೇಶದ ಪೂರ್ವಭಾವಿ ಸಿದ್ಧತೆಗಳ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಸಂಘಟನಾ ಸಮಿತಿ ಸಭೆಯನ್ನು ನಡೆಸುತ್ತಿದ್ದಾರೆ.
ಸಭೆಯಲ್ಲಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತಿಯಿದ್ದರು.