ಬೆಂಗಳೂರು : ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು. ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಆಗಬಹುದು ಎಂದು ಪರಿಷತ್ ಮಾಜಿ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಕುಮಾರ ಕೃಪದ ಅಥಿತಿ ಗೃಹದಲ್ಲಿ ಅಯೋಧ್ಯೆ ಉದ್ಘಾಟನೆ ಕಾರ್ಯಕ್ರಮ ವಿಚಾರವಾಗಿ ಮಾತಮಾಡಿದ ಅವರು ರಾಮ ಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗ್ತಿದೆ.
ಧಾರ್ಮಿಕ ಕಾರ್ಯಕ್ರಮ ಆಗಿದ್ರೆ ನಾವೆಲ್ಲರೂ ಹೋಗುತ್ತಿದ್ದೆವು. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳು. ಅದೇ ರೀತಿ ಧರ್ಮ ಗುರುಗಳು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಮೋದಿಯ ಧರ್ಮವೇ ಇನ್ನೂ ಯಾವುದು ಅಂತ ಗೊತ್ತಾಗಿಲ್ಲ. ಅಮಿತ್ ಶಾ ಧರ್ಮವೇ ಯಾವುದೂ ಅಂತ ಗೊತ್ತಾಗಿಲ್ಲ. ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು. ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಆಗಬಹುದು. ನಮಗೆ ಮಾಹಿತಿ ಸಿಗ್ತಾ ಇದೆ. ಮಾಹಿತಿ ಇದ್ದೇ ಹೇಳ್ತಾ ಇದ್ದೇನೆ ಎಂದು ಹೇಳಿದರು.
ವರದಿ : ಬಸವರಾಜ ಹೂಗಾರ