Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political NewsState News

ಆಗಸ್ಟ್‌ 30ರಂದು ಮೈಸೂರಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ : ಲಕ್ಷ್ಮಿ ಹೆಬ್ಬಾಳ್ಕರ್..!

ಬೆಂಗಳೂರು : ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ. ಈ ಹಿಂದೆ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನೆಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರ ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಈಗ ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಗಸ್ಟ್ 30 ರಂದು ಮೈಸೂರಿಗೆ ರಾಹುಲ್ ಭೇಟಿ ನೀಡಲಿದ್ದು, ಅದೇ ದಿನ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯಲಿದೆ. ಐದು ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಈ ಮೂಲಕ ಚಾಲನೆ ದೊರೆಯಲಿದೆ. ಈ ಯೋಜನೆಯ ಮೂಲಕ ಬಿಪಿಎಲ್ ಕಾರ್ಡ್ ಹೊಂದಿರುವ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆಯಾಗಲಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!