ಮೈಸೂರು : ನಗರದ ಪ್ರಸಿದ್ಧ ನಂಜುಂಡೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಇಂದು ಪತ್ನಿ ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹಾಗೂ ಸೊಸೆ, ಮೊಮ್ಮಗನ ಜೊತೆ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಮುನ್ನವೇ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಭರವಸೆಯೊಂದಿಗೆ ಮೈಸೂರು ಜಿಲ್ಲೆಯ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಹೆಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆಯಾದರೂ ರೇವತಿ ಒಟ್ಟಾಗಿ ದೇಗುಲಕ್ಕೆ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ . ಜೆಡಿಎಸ್ ಪಿತಾಮಹ ಹೆಚ್ ಡಿ ದೇವೇಗೌಡರ ಮನೆತನದ ಸೊಸೆಯಾದರೂ ಸರಳತೆಯ ನಡೆ ನುಡಿಯಲ್ಲಿ ಕಾಣಿಸುತ್ತಿದಲ್ಲದೇ , ಸದದ್ಗೃಹಿಣಿಯಂತೆ ರೇವತಿ ತಮ್ಮ ಮಗುವನ್ನು ಎತ್ತಿಕೊಂಡು ನಡೆದಾಡಿರುವುದು ವಿಡಿಯೋದಲ್ಲಿ ಬೆಳಕಿಗೆ ಬಂದಿದೆ.