ಬೆಂಗಳೂರು : ಸರ್ಕಾರದ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಾಗ್ದಾಳಿ ನಡೆಸಿದರು. ಮಾಜಿ ಸಿಎಂ ಕುಮಾರಸ್ವಾಮಿ ಏನೋ ಕನಸು ಇಟ್ಟುಕೊಂಡಿದ್ದರು. ಕಿಂಗ್ ಮೇಕರ್ ಆಗುತ್ತೇನೆ ಎಂದುಕೊಂಡಿದ್ದರು, ಆದ್ರೆ ಆಗಲಿಲ್ಲ ಎಂದರು.
ನಿಗಮದ ವಸತಿ ಯೋಜನೆಗಳಲ್ಲಿ ಗುತ್ತಿಗೆದಾರರಿಗೆ ಕಾಮಗಾರಿ ಮಾಡಿರುವ ಪ್ರಮಾಣಕ್ಕಿಂತ ಹೆಚ್ಚಾಗಿ ಹಣ ಬಿಡುಗಡೆ ಮಾಡಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಕಹಂತ ಹಂತ ವಾಗಿ ಹಣ ಬಿಡುಗಡೆ ಮಾಡದೆ ಕೆಲಸ ಪೂರ್ತಿ ಮಾಡದಿದ್ದರೂ ಯಾವ ಕಾರಣಕ್ಕೆ ಪಾವತಿ ಮಾಡಲಾಗಿದೆ ಎಂದು ಪ್ರೆಶ್ನೆ ಮಾಡಿದರು. ಇನ್ಮುಂದೆ ಯಾವುದೇ ಕಾರಣಕ್ಕೂ ಈ ರೀತಿ ಮಾಡುವಂತಿಲ್ಲ. ಜತೆಗೆ ಫಲಾನುಭವಿಗಳ ವಂತಿಗೆ ಪಡೆಯದೆ, ಬ್ಯಾಂಕ್ ಸಾಲ ದ ಖಾತರಿ ದೊರಕದೆ ಹಂಚಿಕೆ ಪತ್ರ ನೀಡುವಂತಿಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರ ಒಂದು ಲಕ್ಷ ಮನೆ ಯೋಜನೆ ಸರಿಯಾಗಿ ಅನುಷ್ಠಾನಗೊಳ್ಳದ ಬಗ್ಗೆಯೂ ಬೇಸರ ವ್ಯಕ್ತ ಪಡಿಸಿದ ಸಚಿವರು, ಕಾಲ ಮಿತಿಯಲ್ಲಿ ಮನೆ ನಿರ್ಮಿಸಿ ಕೊಡದಿದ್ದರೆ ಜನರಲ್ಲಿ ವಿಶ್ವಾಸ ಬರಲು ಹೇಗೆ ಸಾಧ್ಯ ಎಂದು ಕೇಳಿದರು.