ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡಮುಸುಕಿದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ 2 ದಿನಗಳ ಕಾಲ ಸಾಧಾರಣ ಮಳೆ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶ್ರೀಲಂಕಾ ಕರಾವಳಿಯಿಂದ ತಮಿಳುನಾಡಿನ ಉತ್ತರ ಕರಾವಳಿ ಉದ್ದಕ್ಕೂ ಇರುವ ಮೇಲ್ಮೈ ಸುಳಿಗಾಳಿಯಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ವಿಜಯಪುರ, ವಿಜಯನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಿದೆ. ಇನ್ನೂ ಮಂಗಳೂರು ವಿಮಾನ ನಿಲ್ದಾಣ, ಮಾಣಿ, ಪಣಂಬೂರು, ತಾಳಗುಪ್ಪ, ಅಂಕೋಲಾ, ಕೊಪ್ಪದಲ್ಲಿ ಮಳೆಯಾಗಿದೆ ಹೀಗಾಗಿ ಮುಂದಿನ ಎರಡು ದಿನಗಳಲ್ಲಿ 2 ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.