Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political NewsState News

ಕಾಂತರಾಜ್​ ವರದಿಯಲ್ಲಿ ಏನಿದೆ ಎಂಬುದೇ ನನಗೆ ಗೊತ್ತಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಂತರಾಜ್ ವರದಿಯೇ ನನ್ನ ಕೈಸೇರಿಲ್ಲ. ಆಗಲೇ ವರದಿಗೆ ವಿರೋಧ ಎಂದರೆ ನಾನು ಏನು ಮಾಡಲಿ ಮಂಡಕಳ್ಳಿ ಏರ್​ಪೋರ್ಟ್​ನಲ್ಲಿ  ಸಿಎಂ ಸಿದ್ದರಾಮಯ್ಯ  ಮಾತನಾಡಿದ್ದಾರೆ

ಮೈಸೂರಲ್ಲಿ ಪೊಲೀಸ್ ಗೌರವ ವಂದನೆ ಸ್ವೀಕರಿಸಿ ಮಾಧ್ಯಮಗಳ ಜೊತೆ ಸಿಎಂ ಸಿದ್ದರಾಮಯ್ಯ ಮಾತನಾಡಿದ ,  ಕಾಂತರಾಜು ಜಾತಿ ಗಣತಿ ವರದಿ ವಿಚಾರದ ವರದಿಯೇ ನನ್ನ ಕೈ ಸೇರಿಲ್ಲ. ಆಗಲೇ ಅದಕ್ಕೆ ವಿರೋಧ ಎಂದರೆ ನಾನು ಏನು ಮಾಡಲಿ. ವರದಿಯಲ್ಲಿ ಏನಿದೆ ಏಂಬುದೇ ಗೊತ್ತಿಲ್ಲ. ಅಂಕಿ ಅಂಶವೇ ಗೊತ್ತಿಲ್ಲದೆ ಅದರ ಬಗ್ಗೆ ಮಾತನಾಡುವುದು ಹೇಗೆ‌. ನವೆಂಬರ್ ಒಳಗ ವರದಿ ಕೊಡಬಹುದೆನೋ ವರದಿ ಕೊಡಲಿ ಆಮೇಲೆ ನೋಡೊಣ ಎಂದರು.

ಕಾಂತರಾಜ್​ ವರದಿಗೆ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ವಿರೋಧ ವಿಚಾರವಾಗಿ ಮಾತನಾಡಿದ ಅವರು, ಈಶ್ವರಪ್ಪ ಒಂದು ಸವಕಲು ನಾಣ್ಯ. ಸವಕಲು ಅನ್ನೋ ಕಾರಣಕ್ಕೆ ಕೆ.ಎಸ್​.ಈಶ್ವರಪ್ಪಗೆ ಟಿಕೆಟ್ ಕೊಟ್ಟಿಲ್ಲ. ಈಶ್ವರಪ್ಪ ಮಾತುಗಳಿಗೆ ಬೆಲೆಯೇ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಕಾಂತರಾಜು ವರದಿ ಪರ ವಿಧಾನಸಭೆಯಲ್ಲಿ ಈಶ್ವರಪ್ಪ ಮಾತಾಡಿಲ್ವಾ? ಈಗ ವರದಿಯನ್ನು ಸುಟ್ಟು ಹಾಕುತ್ತೇವೆ ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದ್ದಾರೆ. ಕೆ.ಎಸ್​.ಈಶ್ವರಪ್ಪ ಮಾತಿಗೆ ಜಾಸ್ತಿ ಬೆಲೆ ಕೊಡಬೇಡಿ ಎಂದಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!