ಬೆಂಗಳೂರು : ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ನೀಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ಕೊಟ್ಟಿದ್ದೇನೆ. ಇದು ನನ್ನ ವೈಯಕ್ತಿಕ ವಿಚಾರ. ಎಷ್ಟು ದೇಣಿಗೆ ನೀಡಿದ್ದೇನೆ ಎಂದು ಹೇಳಿಕೊಳ್ಳಬಾರದು . ಅಯೋಧ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕೂ ಸಿದ್ಧ. ವಿಶೇಷ ಪೂಜೆ ಸಲ್ಲಿಸುತ್ತೇವೆ. ನಾವು ಹಿಂದುಗಳಲ್ವ? ನಮ್ಮ ಪಕ್ಷದಲ್ಲಿಯೂ ಹಿಂದುಗಳಿಲ್ಲವೇ? ಅದರಲ್ಲೇನು ತಪ್ಪಿದೆ ಎಂದಿದ್ದಾರೆ.