Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political NewsState News

ಕುಮಾರಸ್ವಾಮಿಯನ್ನು ಬಿಟ್ಟು ನಾನು ಏನೂ ಮಾಡಲ್ಲ –ಹೆಚ್.ಡಿ ರೇವಣ್ಣ

ಕುಮಾರಸ್ವಾಮಿ ಮತ್ತು ಹೆಚ್.ಡಿ ದೇವೇಗೌಡರು ಏನ್ ತೀರ್ಮಾನ ಮಾಡ್ತಾರೋ ಅದೇ ಅಂತಿಮ ಎಂದು ಹಾಸನದ ಟಿಕೆಟ್ ಗೊಂದಲದ ಚರ್ಚೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ತೆರೆ ಎಳೆದಿದ್ದಾರೆ.

ನಾನು ಹೆಚ್.ಡಿ ಕುಮಾರಸ್ವಾಮಿ (H.D KUMARASWAMY) ಯನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಕೆಲವರು ಭವಾನಿ ಅವರಿಗೆ ಟಿಕೆಟ್ ಕೊಡಿ ಅಂತಾರೆ, ಕೆಲವರು ಇನ್ನೊಬ್ಬರಿಗೆ ಕೊಡಿ ಅಂತಾರೆ. ಅದನ್ನೆಲ್ಲಾ ಕೂತು ತೀರ್ಮಾನ ಮಾಡೋದು ಪಕ್ಷ. ಕುಮಾರಸ್ವಾಮಿ ಮತ್ತು ಹೆಚ್.ಡಿ ದೇವೇಗೌಡರು ಏನ್ ತೀರ್ಮಾನ ಮಾಡ್ತಾರೋ ಅದೇ ಅಂತಿಮ ಎಂದು ಹಾಸನದ ಟಿಕೆಟ್ ಗೊಂದಲದ ಚರ್ಚೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ(H.D REVANNA) ತೆರೆ ಎಳೆದಿದ್ದಾರೆ.

ಹೊಳೆನರಸೀಪುರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಹಾಸನ (HASSAN)ವಿಧಾನಸಭಾ ಕ್ಷೇತ್ರದ ಟಿಕೆಟ್ ಕುಮಾರಸ್ವಾಮಿ ಮತ್ತು ದೇವೇಗೌಡರು ರಾಜ್ಯದ ಅಧ್ಯಕ್ಷರು ಜಿಲ್ಲಾ ಮುಖಂಡರು ಏನು ತೀರ್ಮಾನ ಮಾಡ್ತಾರೆ ಅದೇ ಅಂತಿಮ. ನಾನಾಗಲಿ, ಸೂರಜ್ ಆಗಲಿ, ಪ್ರಜ್ವಲ್ ಆಗಲಿ ಯಾರೂ ತೀರ್ಮಾನ ಮಾಡುವ ಪ್ರಶ್ನೆ ಇಲ್ಲ. ಪಕ್ಷದ ಹೈಕಮಾಂಡ್ ಏನು ಹೇಳುತ್ತೆ ಅದಕ್ಕೆ ಎಲ್ಲರೂ ಬದ್ಧರಾಗಿ ಇರಬೇಕಾಗುತ್ತೆ. ಕುಮಾರಸ್ವಾಮಿ ಮತ್ತೆ ದೇವೇಗೌಡರು ಇಬ್ರಾಹಿಂ ಸಾಹೇಬ್ರು ಜಿಲ್ಲೆಯ ಶಾಸಕರು ನಮ್ಮ ಏಳು ಸೀಟ್ ತೀರ್ಮಾನ ಮಾಡ್ತಾರೆ.  ಇದನ್ನು ಓದಿ :- ಇತಿಹಾಸದಲ್ಲೇ ಮೊದಲ ಬಾರಿಗೆ ಬಿಎಂಟಿಸಿ ಚಾಲಕನಿಂದ ರಾಜ್ಯಪಾಲರಿಗೆ ಪತ್ರ…!

H. D. Devegowda: H. D. Devegowda JD(S) from TUMKUR in Lok ...

ನಮ್ಮ ಜಿಲ್ಲೆಯ ಅಭಿವೃದ್ಧಿ ಮುಖ್ಯ. ಕುಮಾರಸ್ವಾಮಿ, ದೇವೇಗೌಡರ ತೀರ್ಮಾನವೇ ಅಂತಿಮ ಎಂದು ಸ್ಪಷ್ಟನೆ ನೀಡಿದ್ದಾರೆ. ಕುಮಾರಸ್ವಾಮಿ ಮತ್ತು ರೇವಣ್ಣನನ್ನು ಯಾವುದೇ ಕಾರಣದಿಂದ ಬೇರ್ಪಡಿಸಲು ಆಗಲ್ಲ. ಯಾರಾದ್ರು ಬೇರ್ಪಡಿಸುತ್ತೇನೆ ಎಂದುಕೊಂಡಿದ್ದರೆ ಅದು ಭ್ರಮೆ. ನಮ್ಮ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರ ದೇವೇಗೌಡರು, ಕುಮಾರಸ್ವಾಮಿ ರಾಜ್ಯದ ಅಧ್ಯಕ್ಷ, ಸಿ.ಎಂ ಇಬ್ರಾಹಿಂ ತೀರ್ಮಾನ ಮಾಡ್ತಾರೆ. ಎಲ್ಲರೂ ಕೂತು ಚರ್ಚೆ ಮಾಡಿ ಜನರ ವಿಶ್ವಾಸ, ಸ್ಥಳೀಯ ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ನಾನೊಬ್ಬನೇ ತೀರ್ಮಾನ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ರು.

ಇದನ್ನು ಓದಿ :- ಶ್ರೀನಗರದ ಲಾಲ್ ಚೌಕ್ ನಲ್ಲಿ ಭಾರತದ ಬಾವುಟ ಹಾರಿಸಲಿರುವ ರಾಗಾ..!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!