ಬೆಂಗಳೂರು: ನಮ್ಮ ಸಮುದಾಯ, ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪನವರ ಭಾವನೆಗಳನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಸಮುದಾಯದ ಅಧಿಕಾರಿಗಳಿಗೆ ಸಮಸ್ಯೆ ಆಗಿದ್ದರೆ, ನಮ್ಮ ಹತ್ತಿರ ಚರ್ಚಿಸಿ ಬಗೆಹರಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಸಿದ್ದರಾಮಯ್ಯ ಸಂಪುಟದಲ್ಲಿ ಲಿಂಗಾಯತ ಸಮುದಾಯದ ಏಳು ಜನ ಸಚಿವರಿದ್ದೇವೆ. ಹಿರಿಯರು ಹೇಳಿರುವ ವಿಚಾರದ ಬಗ್ಗೆ ಸಂಬಂಧಿಸಿದವರ ಜೊತೆ ಮಾತಾಡುತ್ತೇವೆ. ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಸಮಸ್ಯೆಯಾಗಿದ್ದರೆ ಸಿಎಂ ಗಮನಕ್ಕೆ ತರುತ್ತೇವೆ ಎಂದಿದ್ದಾರೆ.