Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Sports News

ಭಾರತ -ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್‌

ಅಹಮದಾಬಾದ್​ : ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬಹು ನಿರೀಕ್ಷಿತ ಭಾರತ-ಪಾಕ್‌ ವಿಶ್ವಕಪ್‌ ಕ್ರಿಕೆಟ್‌ನ ಹೈವೊಲ್ಟೇಜ್‌ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ.

ಇಂದು ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಪಂದ್ಯ ನೋಡಲು ಮುಂಜಾನೆಯಿಂದಲೇ ಮೈದಾನಕ್ಕೆ ಜನಸಾಗರ ಹರಿದುಬರುತ್ತಿದೆ. ಏಕದಿನ ಕ್ರಿಕೆಟ್​ನಲ್ಲಿ ಉಭಯ ತಂಡಗಳು ಇದುವರೆಗೆ 134 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ 56 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ, 73 ಮ್ಯಾಚ್​ಗಳಲ್ಲಿ ಪಾಕಿಸ್ತಾನ್ ತಂಡ ಜಯ ಸಾಧಿಸಿದೆ.  5 ಪಂದ್ಯಗಳು ಕಾರಣಾಂತರದಿಂದ ರದ್ದಾಗಿತ್ತು ಎಂದು ವರದಿಯಿದೆ. ಏಕದಿನ ವಿಶ್ವಕಪ್​ನಲ್ಲಿ ಆಡಿದ 7 ಪಂದ್ಯಗಳಲ್ಲೂ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸುವಲ್ಲಿ ಭಾರತ ತಂಡ ಯಶಸ್ವಿಯಾಗಿದೆ ಈ ನಿಟ್ಟಿನಲ್ಲಿಇಂದು ನಡೆಯುವ ಭಾರತ -ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್‌ನಲ್ಲಿ  ಭಾರತ ತಂಡ ಗೆಲುವು ಸಾಧಿಸುವ ನಿರೀಕ್ಷೆ ಕ್ರಿಕೆಟ್‌ ಅಭಿಮಾನಿಗಳಲ್ಲಿದೆ.  

ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್

ಪಾಕಿಸ್ತಾನ್ ತಂಡ :

ಬಾಬರ್ ಆಝಂ (ನಾಯಕ), ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಝ್ವಾನ್, ಇಫ್ತಿಕರ್ ಅಹ್ಮದ್, ಸೌದ್ ಶಕೀಲ್, ಸಲ್ಮಾನ್ ಅಲಿ ಅಘಾ, ಶಾದಾಬ್ ಖಾನ್, ಮೊಹಮ್ಮದ್ ನವಾಝ್, ಉಸಾಮಾ ಮಿರ್, ಶಾಹೀನ್ ಶಾ ಆಫ್ರಿದಿ, ಹಸನ್ ಅಲಿ, ಹಾರಿಸ್ ರೌಫ್, ಮೊಹಮ್ಮದ್ ವಾಸಿಂ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!