ಬೆಂಗಳೂರು : ರಮೇಶ ಜಾರಕಿಹೊಳಿ-ಜಗದೀಶ ಶೆಟ್ಟರನ್ನು ಭೇಟಿಯಾದ ವಿಚಾರವಾಗಿ ಅಥಣಿಯಲ್ಲಿ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮದೊಂದಿಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಮಾತನಾಡಿ, ಜಗದೀಶ ಶೆಟ್ಟರು ನಮ್ಮ ಪ್ರೀತಿಯ ಮನುಷ್ಯ. ಅವ್ರು ಎಲ್ಲಿದ್ದರೂ ನಮ್ಮ ಹಿರಿಯರು, ಅವರನ್ನು ನಾನು ಸತತವಾಗಿ 6 ನೇ ಸಲ ಭೇಟಿಯಾಗಿದ್ದೇನೆ. ಈ ಸಲ ಅವರ ಭೇಟಿ ವಿಚಾರ ಲೀಕ್ ಆಗಿದೆ.
ನಾನು ಅವರನ್ನು ತುಂಬಾ ಸಲ ಮೀಟ್ ಆಗಿದ್ದೇನೆ . ಶೆಟ್ಟರ ಅವರು ಒಳ್ಳೆಯವರು, ನಮ್ಮ ಪಕ್ಷ ಬಿಡಬಾರದಾಗಿತ್ತು ದುರ್ದೈವ. ಮುಂದಿನ ದಿನಮಾನದಲ್ಲಿ ಏನಾಗುತ್ತದೆ ಎಂದು ನೋಡೊಣ ರಾಜಕೀಯ ಚರ್ಚೆ ಏನೂ ನಡೆದಿಲ್ಲ ವೈಯಕ್ತಿಕವಾಗಿ ಭೇಟಿಯಾಗಿದ್ದೇನೆ ಎಂದಿದ್ದಾರೆ.