ಬೆಂಗಳೂರು : ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ಅತೀ ಸೂಕ್ಷ್ಮವಾಗಿರೋದ್ರಿಂದ ತನಿಖೆ ನಡೆಸಲು ಸಿಐಡಿಗೆ ಹಸ್ತಾಂತರಿಸಲಾಗುವುದು ಸದನದಲ್ಲೇ ಸಿಎಂ ಸಿದ್ದರಾಮಯ್ಯ (CM Siddaramaiah) ಮಾಹಿತಿ ನೀಡಿದ್ದಾರೆ.
ಜೈನಮುನಿ ಹತ್ಯೆ ಘಟನೆ ಹಿನ್ನೆಲೆ :
ಜುಲೈ 6ರಂದು ಬೆಳಗ್ಗೆಯಿಂದ ನಂದಿ ಕಾಮಕುಮಾರ ಸ್ವಾಮಿಗಳು ಆಶ್ರಮದಲ್ಲಿ ಕಾಣಸಿಗಲಿಲ್ಲ. ಆಗ ಆತಂಕಗೊಂಡ ಭಕ್ತರು ಎಲ್ಲ ಕಡೆ ಹುಡುಕಿದರೂ ಮುನಿಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಚಿಕ್ಕೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಶುಕ್ರವಾರ ರಾತ್ರಿ ಪೊಲೀಸರು ಶಂಕಿತ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆರೋಪಿಗಳು ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಹೊರವಲಯದ ಬೋರ್‌ವೆಲ್‌ನಲ್ಲಿ ಜೈನ ಮುನಿಗಳ ಶವ ಎಸೆದಿರುವುದಾಗಿ ಮಾಹಿತಿ ನೀಡಿದ್ದರು.
ಹೀಗಾಗಿ ಪೊಲೀಸರು ರಾತ್ರಿಯಿಂದಲೇ ಕಾರಾರಯಚರಣೆ ಆರಂಭಿಸಿದ್ದರು. ಜೈನ ಮುನಿಗಳ ದೇಹದ ತುಂಡುಗಳನ್ನು ಬಟ್ಟೆಯಲ್ಲಿ ಕಟ್ಟಿ ತೆರೆದ ಕೊಳವೆ ಬಾವಿಯಲ್ಲಿ ಆರೋಪಿಗಳು ಎಸೆದಿದ್ದರು. 20 ಅಡಿ ಆಳದಲ್ಲಿ ಶವದ ಭಾಗಗಳು ಪತ್ತೆಯಾಗಿತ್ತು.