ಮೈಸೂರು : ಜೂನ್ 27ರಿಂದ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆನೀಡಿದ್ದಾರೆ
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಕಾಂಗ್ರೆಸ್ ಐದು ಗ್ಯಾರಂಟಿಗಳ ಪೈಕಿ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಆ್ಯಪ್ ರೂಪಿಸಿದ್ದೇವೆ. ಜೂನ್ 27 ರಿಂದಲೇ ಗೃಹ ಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.
ಗೃಹ ಲಕ್ಷ್ಮೀ ಯೋಜನೆಯಡಿ ಆಗಸ್ಟ್ 17 ನಂತರವೇ ಮನೆಯೊಡತಿಯ ಖಾತೆಗೆ 2000 ರೂಪಾಯಿ ಹಣ ಹಾಕುತ್ತೇವೆ. ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಕೆಗೆ ಯಾವ ಶುಲ್ಕವೂ ಇರುವುದಿಲ್ಲ. ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಕಾಗಿಲ್ಲ. ಅರ್ಜಿ ಸಲ್ಲಿಕೆ ವೇಳೆ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಿದ್ದೇವೆ. ಅರ್ಜಿ ಸಲ್ಲಿಸಲು ಸ್ಚೀಕೃತಿ ಪತ್ರ ಸಿಕ್ಕರೆ ಫಲಾನುಭವಿಗಳ ಪಟ್ಟಿಗೆ ಸೇರಿಸಬಹುದು. ಇದರಲ್ಲಿ ಯಾವುದೇ ಗೊಂದಲಗಳು ಬೇಡ ಎಂದು ಸ್ಪಷ್ಟನೆ ನೀಡಿದ್ಧಾರೆ.