ಬೆಂಗಳೂರು : ಕರ್ನಾಟಕ ರಾಜ್ಯೋತ್ಸವ 2023 ಆಚರಣೆಗೆ ಆರು ದಿನಗಳು ಮಾತ್ರವೇ ಬಾಕಿ ಉಳಿದಿದೆ. ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆದವರ ಪಟ್ಟಿ ಪ್ರಕಟವಾಗಬೇಕಿದೆ. ಈ ಸಂಬಂಧ ಗುರುವಾರ ಅಕ್ಟೋಬರ್ 26 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಅಂದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಈಗಾಗಲೇ ರಚಿಸಿರುವ ಪ್ರಶಸ್ತಿ ಸಲಹಾ ಸಮಿತಿ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಾಧಕರನ್ನು ಆಯ್ಕೆ ಮಾಡುವ ಸಲುವಾಗಿ ಹಲವು ಸಭೆಗಳನ್ನು ನಡೆಸಿದ್ದಾರೆ. ಸಾಧರಕ ಆಯ್ಕೆಗೆ ಇರುವ ಈ ಸಮಿತಿಯು 30 ಸದಸ್ಯರನ್ನು ಒಳಗೊಂಡಿದೆ.
ಜಿಲ್ಲಾವಾರು ಶಿಫಾರಸುಗಳು ಬಂದಿವೆ. ಅಲ್ಲದೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಭೌತಿಕವಾಗಿ 25000ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆ ಆಗಿವೆ. ಸೇವಾ ಸಿಂಧು ಮೂಲಕ ಸಲ್ಲಿಕೆ ಆಗಿರುವ 25000ಕ್ಕೂ ಅಧಿಕ ಅರ್ಜಿಗಳನ್ನು ಪರಿಶೀಲಿಸಲಾಗಿದೆ.
ಸಾಧಕರ ಆಯ್ಕೆಗೆ ಇರುವ ಸಲಹಾ ಸಮಿತಿ ತಜ್ಞರ ಸಮಿಯು ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು 1:2 ಅನುಪಾತದಲ್ಲಿ ಸಿದ್ಧಪಡಿಸಲಾಗಿದೆ. ಈ ಪಟ್ಟಿಯಲ್ಲಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಿದ್ದಾರೆ. ಪಟ್ಟಿ ಅಂತಿಮಗೊಂಡರೆ ನಾಳೆಯ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಗೊಳ್ಳಲಿದೆ.
ಪ್ರಸಕ್ತ ವರ್ಷ ಒಟ್ಟು 68 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಕಳೆದ 2022ರ ಸಾಲಿನಲ್ಲಿ 67 ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿತ್ತು