ಬೆಂಗಳೂರು : ರಾಜ್ಯ ಸರ್ಕಾರ ಬುಧವಾರ ಮಹತ್ವದ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಿದೆ.
ಈ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಎಕ್ಸ್ ಮೂಲಕ ” ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ:” ಹಾರೈಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಎಕ್ಸ್ :
ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಎಕ್ಸ್ ಮೂಲಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.
ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ. ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ಮೂಲಕ ಹಾರೈಸಿದ್ದಾರೆ.