ಮೈಸೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ್ ಅವರು ಇಂದು ಮೃತಪಟ್ಟಿದ್ದಾರೆ. 61 ವರ್ಷದ ಧ್ರುವ ನಾರಾಯಣ್ ಹೃದಯಾಘಾತದಿಂದ ಇಂದು ಮೈಸೂರಿನ ಡಿಆರ್‍ಎಂಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಧ್ರುವ ನಾರಾಯಣ್ ಅವರಿಗೆ ಇಂದು ಬೆಳಗ್ಗೆ 6.30ರ ವೇಳೆಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರು ತಮ್ಮ ಕಾರಿನ ಡ್ರೈವರ್ ಗೆ ಕರೆ ಮಾಡಿದ್ದು, ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿಯೇ ಉಸಿರು ನಿಲ್ಲಿಸಿದ್ದಾರೆ.
1961ರ ಜುಲೈ 31 ರಂದು ಚಾಮರಾಮನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಧ್ರುವನಾರಾಯಣ್ ಅವರು, ಬೆಂಗಳೂರಿನ ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. 1983 ರಲ್ಲಿ ಕಾಂಗ್ರೆಸ್ ಸೇರಿದ ಧ್ರುವನಾರಾಯಣ್ ಅವರು 1986ರಲಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು. 1999ರಲ್ಲಿ ಮೊದಲ ಬಾರಿಗೆ ಸಂತೆಮಾರಳ್ಳಿ ಕ್ಷೇತ್ರದಿಂದ ಎಲೆಕ್ಷನ್ ಅಖಾqಕ್ಕೆ ಇಳಿದು ಸೋಲು ಅನುಭವಿಸಿದ್ದರು. ಆದ್ರೆ 2004ರ ವಿಧಾನಸಭಾ ಎಲೆಕ್ಷನ್ ನಲ್ಲಿ ಕೇವಲ ಒಂದು ಮತದ ಅಂತರದ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದ್ದರು. ಇದಾದ ಬಳಿಕ 2008ರಲ್ಲಿ ಕೊಳ್ಳೆಗಾಲದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ನಂತರ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಕಳೆದ 2019 ರ ಲೋಕಸಭಾ ಎಲೆಕ್ಷನ್ ನಲ್ಲಿ ಸೋತ ಧ್ರುವ ನಾರಾಯಣ್ ರಾಜ್ಯ ರಾಜಕಾರಣದತ್ತ ಗಮನ ಹರಿಸಿದ್ದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ಮಾಡಿಕೊಂಡಿದ್ದರು.