ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತ ಅರ್ಜುನ ಅಂತ್ಯಕ್ರಿಯೆಗೆ ಸ್ಥಳೀಯರ ವಿರೋಧಿಸಿದಕ್ಕೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಗೆ ಅಂತಿಮ ವಿದಾಯ ಸಂದರ್ಭದಲ್ಲಿ ಸ್ಥಳೀಯರು ಅಂತ್ಯಕ್ರಿಯೆಗೆ ವಿರೋಧಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸೋದಕ್ಕಾಗಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದ ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿತ್ತು. ಇದರಿಂದ ತೀವ್ರ ಗಾಯಗೊಂಡಿದ್ದ ಅರ್ಜುನ ಮೃತಪಟ್ಟಿದೆ ಎನ್ನಲಾಗಿತ್ತು. ಅಂತಿಮ ವಿಧಿವಿಧಾನ ನೆರವೇರಿಸಿ, ಹಾಸನ ಜಿಲ್ಲಾಡಳಿತದಿಂದ ಅರ್ಜುನನಿಗೆ ಸರ್ಕಾರಿ ಗೌರವ ಸಮರ್ಪಿಸಿದ್ದಾರೆ. ಬಳಿಕ ಅರ್ಜುನ ಅಂತ್ಯಕ್ರಿಯೆಗೆ ಸಿದ್ದತೆ ನಡೆಸಲಾಗುತ್ತಿದೆ. ಈ ವೇಳೆ ಅರ್ಜುನ ಅಂತ್ಯಕ್ರಿಯೆಗೆ ಸ್ಥಳೀಯರ ವಿರೋಧಿಸಿದ್ದಾರೆ.