ಬೆಂಗಳೂರು : ಹಿಟ್ ಆ್ಯಂಡ್ ರನ್ ಕೇಸ್ನಲ್ಲಿ 10 ವರ್ಷ ಜೈಲು ಹಾಗೂ 7 ಲಕ್ಷ ರೂ. ದಂಡ ವಿಧಿಸುವ ಕೇಂದ್ರ ಸರ್ಕಾರದ ಕಾನೂನು ವಿರೋಧಿಸಿ ಜನವರಿ 17ರಿಂದ ಲಾರಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಮಾಲೀಕರ ಸಂಘ ಮಾಹಿತಿ ನೀಡಿದೆ.
ಮಾಧ್ಯಮದೊಂದಿಗೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ನವೀನ್ ರೆಡ್ಡಿ ಮಾತನಾಡಿ, ಯಾವುದಾದ್ರೂ ಅಪಘಾತವಾದರೆ ಚಾಲಕರ ಮೇಲೆ ಹಲ್ಲೆ ನಡೆಯುತ್ತದೆ.
ಹಿಂದಿನ ಚಕ್ರಕ್ಕೆ ಬೈಕ್ ಸಿಕ್ಕರೆ ಕೂಡಲೇ ಭಾರಿ ವಾಹನ ನಿಲ್ಲಿಸುವುದು ಸುಲಭವಿಲ್ಲ. ಒಂದು ವೇಳೆ ಲಾರಿ ನಿಲ್ಲಿಸಿ ಬಂದರೆ ಅಲ್ಲಿರುವ ಜನರು ಚಾಲಕನ ಮೇಲೆ ಹಲ್ಲೆ ಮಾಡುತ್ತಾರೆ. ಆತ್ಮರಕ್ಷಣೆಗಾಗಿ ಲಾರಿ ಚಾಲಕರು ಸ್ಥಳೀಯ ಸ್ಟೇಷನ್ಗಳಿಗೆ ಹೋಗುತ್ತಾರೆ. ಆತ್ಮರಕ್ಷಣೆಗಾಗಿ ಲಾರಿ ಚಾಲಕರು ಘಟನಾ ಸ್ಥಳದಿಂದ ಓಡಿ ಪೊಲೀಸ್ ಸ್ಟೇಷನ್ಗಳಿಗೆ ಹೋಗುತ್ತಾರೆ. ಇಂಥ ಘಟನೆಗಳಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ ಎಂದು ದಾಖಲು ಮಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರ ಕೂಡಲೇ ಈ ಕಾನೂನನ್ನು ರದ್ದು ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.