ಬೆಂಗಳೂರು : ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಬೆನ್ನಲ್ಲೆ ಪ್ರತಿಮಾ ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಪ್ರತಿಮಾ ಕಾರು ಚಾಲಕ ಕಿರಣ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಈತ ಕಳೆದ ಹಲವು ವರ್ಷಗಳಿಂದ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಆತನನ್ನು ಕೆಲಸದಿಂದ ಕಿತ್ತು ಹಾಕಲಾಗಿತ್ತು. ಇದರಿಂದ ಸಿಟ್ಟುಗೊಂಡು ಪ್ರತಿಮಾ ಅವರನ್ನು ಕಾರು ಚಾಲಕ ಕಿರಣ್ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗುತ್ತಿದೆ. ಇದೀಗ ಪ್ರತಿಮಾ ಕಾರು ಚಾಲಕ ಕಿರಣ್ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅಷ್ಟೇ ಅಲ್ಲದೇ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಂಡಿದೆ. ನಿನ್ನೆ ಪ್ರತಿಮಾ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ವಶಕ್ಕೆ ಪಡೆದ ಮೊಬೈಲ್ ಪರಿಶೀಲನೆಗೆ ಪೊಲೀಸರು ಮುಂದಾಗಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸರಿಂದ ಮೊಬೈಲ್ ಫೋನ್ ಪರಿಶೀಲನೆ ನಡೆಯುತ್ತಿದೆ.
ಕೊಲೆಯಾದ ವೇಳೆ ಮನೆಯಲ್ಲಿ ಬಾಗಿಲು ಬಳಿ ಪ್ರತಿಮಾ ಮೊಬೈಲ್ ಫೋನ್ ಪತ್ತೆಯಾಗಿತ್ತು. ಪೋನ್ ಅನ್ಲಾಕ್ ಹಾಗೂ ರಿಟ್ರೀವ್ ಗೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಒಂದು ವಾರದಿಂದ ಎಷ್ಟು ಕರೆಗಳು ಬಂದಿದ್ವು, ಯಾರ್ಯಾರು ಕರೆ ಮಾಡಿದ್ದಾರೆ ಎಂದು ಪರಿಶೀಲನೆ ಮಾಡುತ್ತಿದ್ದಾರೆ. ಪ್ರತಿಮಾ ಯಾರಿಗಾದ್ರು ಕರೆ ಮಾಡಿ ಮಾತನಾಡಿದ್ದಾರಾ ಅಂತಾಲೂ ಪರಿಶೀಲನೆ ಮಾಡುತ್ತಿದ್ದಾರೆ. ಆದ್ರೆ ಫೋನ್ ಲಾಕ್ ಹಿನ್ನೆಲೆ, ಟೆಕ್ನಿಕಲ್ ಸೆಲ್ ಗೆ ರವಾನಿಸಿ ಪರಿಶೀಲನೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದು, ಸುಬ್ರಮಣ್ಯಪುರ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ.