Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

BIETC ನೂತನ ಕಟ್ಟಡ ಉದ್ಘಾಟನೆ ಮಾಡಿದ ಮೋದಿ

ಬೆಂಗಳೂರು (ದೇವನಹಳ್ಳಿ): ಏರೋಸ್ಪೇಸ್ ಪಾರ್ಕ್ ಬೋಯಿಂಗ್ ಕಂಪನಿಯ ಘಟಕ  ಉದ್ಘಾಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಿದರು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಆಗಮಿಸಿ, BIETC ಕ್ಯಾಂಪಸ್‌ ಉದ್ಘಾಟನೆ ಮಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ವಿಮಾನ ನಿಲ್ದಾಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಇಂದು ಬೆಳಗ್ಗೆ 8 ರಿಂದ ಸಂಜೆ 6 ಗಂಟೆ ವರೆಗೆ ನಿರ್ಬಂಧಿಸಲಾಗಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಥ್, ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್ ಅಶೋಕ್, ಸಿಎಂ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಪ್ರಧಾನಿ ಮೋದಿಯನ್ನು ಸ್ವಾಗತ ಮಾಡಿದರು. ಸಿಎಂ ಸಿದ್ದರಾಮಯ್ಯ ಕೈ ಹಿಡಿದು ಆತ್ಮೀಯವಾಗಿ ಪ್ರಧಾನಿ ಮೋದಿ ಅವರು ಮಾತನಾಡಿದರು.

ಏನಿದು ಬೋಯಿಂಗ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕೇಂದ್ರ (BIETC)?

  • ಅಮೆರಿಕಾದಿಂದ ಹೊರಗೆ, ಸ್ಥಾಪನೆಯಾಗಿರುವ ಬೋಯಿಂಗ್ ಸಂಸ್ಥೆಯ ಅತಿದೊಡ್ಡ ಘಟಕ ಇದು
  • 1,600 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕೇಂದ್ರ
  • 43 ಎಕರೆಗಳಷ್ಟು ವಿಶಾಲ ಪ್ರದೇಶದಲ್ಲಿ ವ್ಯಾಪಿಸಿರುವ ಬಿಐಇಟಿಸಿ ಕ್ಯಾಂಪಸ್
  • ಈ ಸಂಸ್ಥೆ ಭಾರತೀಯ ಪ್ರತಿಭೆಗಳನ್ನು ಸ್ವಾಗತಿಸಲಿದ್ದು, ಅದರಲ್ಲೂ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರಗಳ ಪ್ರತಿಭೆಗಳಿಗೆ ಅವಕಾಶಗಳನ್ನು ಒದಗಿಸಲಿದೆ
  • ಬಿಐಇಟಿಸಿ ಭಾರತದಲ್ಲಿ ಬೋಯಿಂಗ್‌‌ ಸಂಸ್ಥೆಯ ಅತಿದೊಡ್ಡ ವಿಭಾಗವಾಗಿದೆ
  • ದೇಶದ ಸ್ಟಾರ್ಟಪ್‌ಗಳು, ಖಾಸಗಿ ವಲಯ ಮತ್ತು ಸರ್ಕಾರದೊಡನೆ ಈ ಬಿಐಇಟಿಸಿ ಕೇಂದ್ರ ಕಾರ್ಯಾಚರಿಸಲಿದೆ
  • ಜಾಗತಿಕ ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮಕ್ಕೆ ನೂತನ ಉತ್ಪನ್ನಗಳು ಮತ್ತು ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಕೇಂದ್ರ ಗಮನ ಹರಿಸಲಿದೆ.
  • ಬಿಐಇಟಿಸಿ ಕೇಂದ್ರದಿಂದ ಜಾಗತಿಕವಾಗಿ ಏರೋಸ್ಪೇಸ್ ಉದ್ಯಮದ ಪ್ರಗತಿಗಾಗಿ ಕಾರ್ಯಾಚರಿಸಲು ಇನ್ನಷ್ಟು ಸಹಕಾರಿ
  • 3,000ಕ್ಕೂ ಹೆಚ್ಚು ಇಂಜಿನಿಯರ್‌ಗಳನ್ನು ಹೊಂದುವ ಗುರಿ ಹಾಕಿಕೊಂಡಿದೆ ಬಿಐಇಟಿಸಿ
  • ಈ ಇಂಜಿನಿಯರ್‌ಗಳು ಸಂಶೋಧನೆ ಮತ್ತು ಅಭಿವೃದ್ಧಿ, ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಭಾಗಿಯಾಗಿ, ಆಧುನಿಕ ತಂತ್ರಜ್ಞಾನಗಳಾದ ಕೃತಕ ಬುದ್ಧಿಮತ್ತೆ (ಎಐ), ಮೆಷಿನ್ ಲರ್ನಿಂಗ್, ಇಂಡಸ್ಟ್ರಿಯಲ್ ಇಂಟರ್ನೆಟ್ ಆಫ್ ಥಿಂಗ್ಸ್, ಕ್ಲೌಡ್ ಕಂಪ್ಯೂಟಿಂಗ್, ಮಾಡೆಲ್ ಆಧಾರಿತ ಇಂಜಿನಿಯರಿಂಗ್, ಮತ್ತು ಅಡ್ಡಿಟಿವ್ ಉತ್ಪಾದನೆಗಳನ್ನು ಬಳಸಿಕೊಳ್ಳಲಿದ್ದಾರೆ.

ಬೋಯಿಂಗ್ ಸುಕನ್ಯಾ ಯೋಜನೆ ಎಂದರೇನು?

  • ದೇಶಾದ್ಯಂತ ಹೆಚ್ಚು ಹೆಣ್ಣು ಮಕ್ಕಳು ವೈಮಾನಿಕ ವಲಯಕ್ಕೆ ಸೇರಲು ನೆರವಾಗುವ ಉದ್ದೇಶ ಹೊಂದಿರುವ ಬೋಯಿಂಗ್ ಸುಕನ್ಯಾ ಯೋಜನೆ
  • ಈ ಕಾರ್ಯಕ್ರಮ ಹೆಣ್ಣು ಮಕ್ಕಳಿಗೆ ಪ್ರಮುಖ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ ಕೌಶಲಗಳನ್ನು ಸಂಪಾದಿಸಲು ಅವಕಾಶ ಕಲ್ಪಿಸಲಿದೆ
  • ಹೆಣ್ಣು‌ಮಕ್ಕಳನ್ನು ವೈಮಾನಿಕ ಉದ್ಯೋಗಗಳಿಗೆ ಸಿದ್ಧಗೊಳಿಸಲಿದೆ
  • ಬಾಲಕಿಯರಿಗಾಗಿ ಬೋಯಿಂಗ್ ಸುಕನ್ಯಾ ಯೋಜನೆ 150 ಸ್ಥಳಗಳಲ್ಲಿ ಕೌಶಲ್ಯ ತರಬೇತಿ ಪ್ರಯೋಗಾಲಯಗಳನ್ನು ತೆರೆಯಲಿದೆ
  • ವೈಮಾನಿಕ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಪಡೆಯಲು ಉತ್ತೇಜನ ನೀಡಲಿರುವ ಯೋಜನೆ
  • ಈ ಯೋಜನೆಯಡಿ ಪೈಲಟ್ ಆಗಲು ತರಬೇತಿ ಪಡೆಯುತ್ತಿರುವ ಬಾಲಕಿಯರಿಗೂ ವಿದ್ಯಾರ್ಥಿ ವೇತನ ಸಿಗಲಿದೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!