ಮೈಸೂರು : ಕೋಟ್ಯಾಂತರ ರೂ. ಮೌಲ್ಯದ ಮರ ಕಡಿದ ಆರೋಪದ ಮೇಲೆ ಬಿಜೆಪಿ ಸಂಸದ ಪ್ರತಾಪ್ ಸಿಂಹ(Pratap Simha)ಸಹೋದರ ವಿಕ್ರಂಸಿಂಹ ಬಂಧಿಸಲಾಗಿದೆ. ಈ ವಿಚಾರವಾಗಿ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ಮಾತನಾಡಿ, ನಿಮ್ಮ ಮಗನ ರಾಜಕೀಯ ಭವಿಷ್ಯಕ್ಕಾಗಿ ನನ್ನ ಕುಟುಂಬವನ್ನು ಮುಗಿಸಲು ಪ್ರಯತ್ನ ಮಾಡುತ್ತಿದ್ದೀರಿ, ಕೊನೆಗೆ ನನ್ನ ಜೀವ ತೆಗೆಯಬಹುದು ಅಷ್ಟೆ ಭಾವುಕರಾಗಿ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್, ಬ್ರಿಲಿಯಂಟ್ ಪೊಲಿಟೀಷಿಯನ್. ನಿಮ್ಮ ಮಗನನ್ನ ಎಂ.ಪಿ. ಮಾಡಿಕೊಳ್ಳುವ ಸಲುವಾಗಿ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದೀರಿ. ಎಫ್.ಐ.ಆರ್. ನಲ್ಲಿ ಹೆಸರಿಲ್ಲದಿದ್ದರು ನನ್ನ ತಮ್ಮನನ್ನು ಅರೆಸ್ಟ್ ಮಾಡಿಸಿದ್ದೀರಿ. ಮನೆಯಲ್ಲಿ ವಯೋವೃದ್ದ ತಾಯಿ ಇದ್ದಾಳೆ. ನನ್ನ ತಂಗಿ ಇದ್ದಾಳೆ ಅವರನ್ನು ಅರೆಸ್ಟ್ ಮಾಡಿಬಿಡಿ. ನನ್ನ ತೆಜೋವಧೆ ಮಾಡಿದ್ದಾಯಿತು. ಈಗ ನನ್ನ ಕುಟುಂಬವನ್ನ ಮುಗಿಸಲು ಪ್ರಯತ್ನ ಮಾಡುತ್ತಿದ್ದೀರಿ. ಆದ್ರೆ ಒಂದು ನೆನಪಿಟ್ಟುಕೊಳ್ಳಿ ಇದ್ಯಾವುದಕ್ಕು ನಾನು ಜಗ್ಗುವ ಮಗನಲ್ಲ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.