ಜಗತ್ತಿನ ಮುಂಚೂಣಿ ಕಂಪನಿಗಳಲ್ಲಿ ಒಂದಾಗಿರುವ ತೈವಾನ್ ಮೂಲದ ಫಾಕ್ಸ್‌ಕಾನ್ ಸಮೂಹದ ಸಿಇಒ ಮತ್ತು ಅಧ್ಯಕ್ಷ ಶ್ರೀ ಯಂಗ್ ಲಿಯು ನೇತೃತ್ವದ ಉನ್ನತ ಮಟ್ಟದ ನಿಯೋಗವು ಬೆಂಗಳೂರಿನಲ್ಲಿಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ. ಮುರುಗೇಶ್ ಆರ್ ನಿರಾಣಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಹೂಡಿಕೆ ಕುರಿತಂತೆ ಸಮಗ್ರವಾಗಿ ಚರ್ಚಿಸಿತು.
ಈ ವೇಳೆ ಮಾತನಾಡಿದ ಸಚಿವ ನಿರಾಣಿ ಅವರು ನಮ್ಮ ಉದ್ಯಮ ಸ್ನೇಹಿ ಹಾಗೂ ಹೂಡಿಕೆ ಸ್ನೇಹಿ ನೀತಿಗಳು ಫಾಕ್ಸ್‌ಕಾನ್ ಕಂಪನಿಯು ರಾಜ್ಯದಲ್ಲಿ ಹೂಡಿಕೆ ಮಾಡಲು ಪ್ರಮುಖ ಕಾರಣವಾಗಿದೆ ಇದರಿಂದ ಉದ್ಯೋಗ ಸೃಷ್ಟಿಯ ಜೊತೆಗೆ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಗರಿಗೆದರಲಿವೆ ಎಂದರು. ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.