ಬೆಂಗಳೂರು : ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇ ಸಂಚಾರ ಸಾವಿನ ಹೆದ್ದಾರಿ ಎಂಬ ಕುಖ್ಯಾತಿ ಗಳಿಸುತ್ತಿದೆ. ಪದೇ ಪದೇ ಅಪಘಾತ ಸಂಭವಿಸುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.
ಈ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣ ತಾಲೂಕಿನ ಬಾಬಾಸಾಹೇಬರ ಪಾಳ್ಯ ಬಳಿ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಡಿಜಿಪಿ ಅಲೋಕ್ ಕುಮಾರ್ ಅವರು ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೀಕ್ಷಣೆ ಮಾಡುವ ವೇಳೆ ಎನ್ಹೆಚ್ಎಐ, ಪಿಡಬ್ಲೂ, ಆರ್ಟಿಓ, ಆರೋಗ್ಯ ಅಧಿಕಾರಿಗಳು, ಐಜಿಪಿ ರವಿಕಾಂತೇಗೌಡ ಹಾಗೂ ಎಸ್ಪಿ ಕಾರ್ತಿಕ್ ರೆಡ್ಡಿ ಸಾಥ್ ನೀಡಿದ್ದಾರೆ.
ಈ ಎಕ್ಸ್ ಪ್ರೆಸ್ ವೇ ಓಪನ್ ಆದ ಬಳಿಕ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೀಗ ಐದು ತಿಂಗಳಲ್ಲಿ 105 ಜನ ಸಾವನ್ನಪ್ಪಿದ್ದು, 250 ಅಪಘಾತ ಪ್ರಕರಣ ದಾಖಲಾಗಿವೆ.
ಅಲ್ಲದೇ ರಾಮನಗರ ಜಿಲ್ಲೆಯಲ್ಲಿಯೇ 243 ಅಪಘಾತಗಳು ಸಂಭವಿಸಿದ್ದು, 50 ಜನ ಮೃತಪಟ್ಟಿದ್ದಾರೆ. 190 ಜನರಿಗೆ ಗಾಯಗಳಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 575 ಅಪಘಾತಗಳಾಗಿದ್ದು, 60 ಮಂದಿ ಜನ ಮೃತಪಟ್ಟಿದ್ದಾರೆ ವರದಿಯಾಗಿದೆ.