ಕಾಂಗ್ರೆಸ್ (CONGRESS) ಬೆಂಬಲ ನೀಡದಿದ್ದಕ್ಕೆ ನಿಖಿಲ್ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ದೇವೇಗೌಡರು ಚುನಾವಣೆಯಲ್ಲಿ ಸೋತರು ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ(H.D KUMARASWAMY) ಆರೋಪ ಮಾಡಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರದ ಕುಡಿತಿನಿ ಪಟ್ಟಣದಲ್ಲಿ ಪಂಚರತ್ನ ರಥಯಾತ್ರೆಯ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದೆ. ಕ್ಷೇತ್ರದ @JanataDal_S ಅಭ್ಯರ್ಥಿ ಶ್ರೀ ಸೋಮಣ್ಣ ಮತ್ತಿತರರು ಹಾಜರಿದ್ದರು.#ಪಂಚರತ್ನ_ರಥಯಾತ್ರೆ #ಸಂಡೂರು #ಬಳ್ಳಾರಿ pic.twitter.com/hDNOvTDm2t
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 30, 2023
ಬಳ್ಳಾರಿ(BELLARI) ಜಿಲ್ಲೆಯ ಸಂಡೂರು ತಾಲೂಕಿನ ಕುರೆಕೊಪ್ಪದಲ್ಲಿ ಮಾತನಾಡಿದ ಅವರು, ಹೆಚ್.ಡಿ.ದೇವೇಗೌಡರು ಸಿದ್ದರಾಮಯ್ಯರನ್ನು ಉಪ ಮುಖ್ಯಮಂತ್ರಿ ಮಾಡಿದ್ದರು. ಮುಖ್ಯಮಂತ್ರಿ ಆಗೋಕೆ ಮಾತ್ರ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಹೋಗಿದ್ದಾರೆ ಎಂದು ಹೇಳಿದರು. 30 ವರ್ಷದಿಂದ ನಮಗೆ ಕುಟುಂಬ ರಾಜಕಾರಣದ ಲೇಬಲ್ ಕೊಟ್ಟಿದ್ದಾರೆ. ವರುಣಾದಲ್ಲಿ ಪುತ್ರನ ಭವಿಷ್ಯಕ್ಕಾಗಿ ಸಿದ್ದರಾಮಯ್ಯ ಹೊರಗೆ ಹೋಗುತ್ತಿದ್ದಾರೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲು ಬರುವುದಿಲ್ಲ. ಹೀಗಾಗಿ ಪುತ್ರನನ್ನು ತರುತ್ತಿದ್ದಾರೆ. ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪಗೂ ಅವರ ಮಕ್ಕಳ ಬಗ್ಗೆಯೇ ಚಿಂತೆ ಎಂದು ಹೇಳಿದ್ರು. ಇದನ್ನು ಓದಿ :- ಸಂಸತ್ ನಲ್ಲಿ ದ್ರೌಪದಿ ಮುರ್ಮು ಚೊಚ್ಚಲ ಭಾಷಣ- ಕೇಂದ್ರದ ಸಾಧನೆ ಕೊಂಡಾಡಿದ ರಾಷ್ಟ್ರಪತಿ..
ಬಳ್ಳಾರಿ ಕ್ಷೇತ್ರದ ಸಂಡೂರು ವಿಧಾನಸಭೆ ಕ್ಷೇತ್ರದ ಕುಡುತಿನಿ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆಯ ವೇಳೆ ಕೈಗಾರಿಕೆಗಳಿಗಾಗಿ ಭೂಮಿ ಕಳೆದುಕೊಂಡು ಕಳೆದ 44 ದಿನಗಳಿಂದ ಧರಣಿ ನಡೆಸುತ್ತಿರುವ ರೈತರನ್ನು ಭೇಟಿಯಾಗಿ ಅವರ ಅಹವಾಲು ಆಲಿಸಿದೆ.1/2#ಪಂಚರತ್ನ_ರಥಯಾತ್ರೆ #ಸಂಡೂರು #ಬಳ್ಳಾರಿ pic.twitter.com/Lkl7jvcFgZ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 30, 2023
ಇನ್ನೊಂದು ವಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡುತ್ತೇನೆ. 2028ರಲ್ಲಿ 2 ರಾಷ್ಟ್ರೀಯ ಪಕ್ಷಗಳನ್ನು ರಾಜ್ಯದ ಜನ ತಿರಸ್ಕಾರ ಮಾಡುತ್ತಾರೆ. 2018ರಲ್ಲಿ ಕಾಂಗ್ರೆಸ್ ಷರತ್ತು ಹಾಕಿ ಅಧಿಕಾರ ನೀಡಿತ್ತು. ಸ್ವತಂತ್ರವಾಗಿ ಅಧಿಕಾರ ನಡೆಸಲು ಕಾಂಗ್ರೆಸ್ ನಾಯಕರು ನನಗೆ ಬಿಡಲಿಲ್ಲ. ಸಮ್ಮಿಶ್ರ ಸರ್ಕಾರವಿದ್ದರೆ ಬಡತನವನ್ನು ಹೋಗಲಾಡಿಸಲು ಸಾಧ್ಯವಿಲ್ಲ. ಎರಡೂ ಪಕ್ಷದ ಜೊತೆಗೆ ಸಮ್ಮಿಶ್ರ ಸರ್ಕಾರ ಮಾಡಿ ಅನುಭವ ಇದೆ. ಈಗಿರೋದು 2006ರ ಬಿಜೆಪಿ ಅಲ್ಲ, ರಾಷ್ಟ್ರ ನಾಯಕರ ಶಕ್ತಿ ಇರುವ ಬಿಜೆಪಿ. 2018ರಲ್ಲಿ ಕಾಂಗ್ರೆಸ್ ಜತೆ ಹೋಗಿದ್ದಕ್ಕೆ ಗುಲಾಮನಾಗಿರುವ ಹಾಗೆ ಆಯ್ತು. ಸಿದ್ದರಾಮಯ್ಯ ಅಧಿಕಾರ ಹೋದರೂ ನನಗೆ ಮನೆ ಬಿಟ್ಟು ಕೊಡಲಿಲ್ಲ. ಸಮ್ಮಿಶ್ರ ಸರ್ಕಾರ ಮಾಡಿ ಕಾಂಗ್ರೆಸ್ ನವರು ಕುತ್ತಿಗೆ ಕೊಯ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.
ಇದನ್ನು ಓದಿ :- ಜಾರಕಿಹೊಳಿ ಆರೋಪಗಳಿಗೆ ಅಧ್ಯಕ್ಷರೇ ಉತ್ತರ ಕೊಡುತ್ತಾರೆ – ಎಂ.ಬಿ ಪಾಟೀಲ್