ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಪ್ರಸಕ್ತ ವಿಧಾನಸಭೆ ಚುನಾವಣೆ ಫಲಿತಾಂಶ ನನಗೆ ಅತೀವ ಬೇಸರ ಉಂಟು ಮಾಡಿದೇ ಎನ್ನುವುದರ ಜತೆಗೆ, ಪಕ್ಷವನ್ನು ಹೊಸದಾಗಿ ಮರು ನಿರ್ಮಾಣ ಮಾಡುವ ಅನೇಕ ಸಾಧ್ಯತೆಗಳನ್ನು ತೆರೆದಿಟ್ಟಿದೆ ಎಂದು ವಿಶ್ವಾಸದಿಂದ ಹೇಳಬಯಸುತ್ತೇನೆ. ಇಷ್ಟು ದಿನ ಕರ್ನಾಟಕ ಪ್ರದೇಶ ಯುವ ಜನತಾದಳ (ಜಾತ್ಯತೀತ) ಘಟಕದ ಅಧ್ಯಕ್ಷನಾಗಿ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಿಂದ ನನ್ನ ಕೈಲಾದ ಮಟ್ಟಿಗೆ ಕರ್ತವ್ಯ ನಿರ್ವಹಿಸಿದ್ದೇನೆ. ಪಕ್ಷ ಸಂಘಟನೆ ಮಾಡಲು ಶ್ರಮಿಸಿದ್ದೇನೆ ಎಂದಿದ್ದಾರೆ.
ಈ ಚುನಾವಣೆಯ ಸೋಲನ್ನು ಮಟ್ಟ ಪಕ್ಷವನ್ನು ಬಲವಾಗಿ ಕಟ್ಟುವ ದಿಸೆಯಲ್ಲಿ ನಾವೆಲ್ಲರೂ ಅರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಬೇಕಿದೆ. ಹೊಸ ನಾಯಕತ್ವಕ್ಕೆ ಅವಕಾಶ ಮಾಡಿಕೊಡಬೇಕಿದೆ. ಈ ನಿಟ್ಟಿನಲ್ಲಿ ನಾನು ಕರ್ನಾಟಕ ಪ್ರದೇಶ ಜನತಾದಳ (ಕರ್ನಾಟಕ) ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಸಂಘಟನೆ ಕೆಲಸಕ್ಕೆ ನಾನು ಸದಾ ಸಿದ್ಧ. ಭಾವನೆಗಳನ್ನು ತಾವು ಗೌರವಿಸುವಿರಿ ಎನ್ನುವ ವಿಶ್ವಾಸದೊಂದಿಗೆ ಇಷ್ಟು ದಿನ ನನ್ನೊಂದಿಗೆ ಶ್ರಮಿಸಿ ಪಕ್ಷಕ್ಕಾಗಿ ಹೆಗಲು ಕೊಟ್ಟ ಎಲ್ಲಾ ಹಿರಿ, ಕಿರಿಯರಿಗೆ ನನ್ನ ಗೌರವಪೂರ್ವಕ ನಮನಗಳು ಎಂದು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.