ಬೆಂಗಳೂರು : ತಮಿಳುನಾಡಿಗೆ ಒಂದು ತೊಟ್ಟು ನೀರನ್ನು ಕೂಡ ಬಿಡಬಾರದು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ನೀರು ಬಿಟ್ಟು ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧ ಮಾಡಿದೆ. ಕೂಡಲೇ ಸರ್ಕಾರ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.
ಹಾಗೆ ಜೆಡಿಎಸ್ – ಬಿಜೆಪಿ ಮೈತ್ರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ನಿರ್ಧಾರ ಮಾಡ್ತಾರೆ. ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿರುವುದು ಅವರೇ. ಮೈತ್ರಿ ಬಗ್ಗೆ ನಾನೇನು ಪ್ರಸ್ತಾಪ ಮಾಡುವುದಿಲ್ಲ. ಮೈತ್ರಿ ಬಗ್ಗೆ ವರಿಷ್ಠರೇ ಕೇಳಿದರೆ ನಮ್ಮ ಅಭಿಪ್ರಾಯ ಹೇಳುತ್ತೇವೆ ಎಂದು ಅವರು ತಿಳಿಸಿದ್ದಾರೆ.