ಬೆಂಗಳೂರು : ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರ ಗೃಹಲಕ್ಷ್ಮೀ ಯೋಜನೆ(Grihalakshmi Scheme)ಗೆ ಚಾಲನೆ ನೀಡಲು ಭರ್ಜರಿಯಾಗಿ ಸಿದ್ಧತೆ ನಡೆಸಲಾಗುತ್ತಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಾಳೆ ಸಂಜೆ 5.00 ಗಂಟೆಗೆ ಗೃಹಲಕ್ಷ್ಮೀ ಯೋಜನೆ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ(CM Siddaramaiah) ಚಾಲನೆ ನೀಡಲಿದ್ದು, ಮನೆ ಯಜಮಾನಿ ಖಾತೆಗೆ 2000 ಸರ್ಕಾರ ಜಮೆ ಮಾಡಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸಕಲ ಸಿದ್ಧತೆ ನಡೆಸಿದೆ.
ಜುಲೈ 20 ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿಗೆ ಆಹ್ವಾನಿಸಲಾಗಿದೆ. ಗ್ರಾಮ ಒನ್ ಬೆಂಗಳೂರು ಒನ್ ನಾಡ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು. ಪಡಿತರ ಕಾರ್ಡ್‌ನ ಮನೆ ಒಡತಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಗೆ ಪಡಿತರ ಚೀಟಿ ಆಧಾರ್ ಕಾರ್ಡ್ ಬ್ಯಾಂಕ್ ಅಕೌಂಟ್ ಕಡ್ಡಾಯವಾಗಿದೆ. ಬ್ಯಾಂಕ್ ಅಕೌಂಟ್‌ಗೆ ಆಧಾರ್ ಲಿಂಕ್ ಆಗಿರಬೇಕು. ಅರ್ಜಿ ಸಲ್ಲಿಕೆಗೆ ಗಂಡನ ವೋಟರ್ ಐಡಿ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದಿದ್ದಾರೆ.