ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D.K SHIVKUMAR) ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (SIDDARAMAIAH) ಅವರ ನಡೆಗೆ ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ (G.PARAMESHWAR) ಅಸಮಾಧಾನಗೊಂಡಿದ್ದಾರೆ.
ಪಕ್ಷದ ಕೆಲ ನಿರ್ಧಾರಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬುದು ಪರಮೇಶ್ವರ್ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ. ಈ ನಡುವೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (RANDEEPA SINGH SURJEWALA) ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪ್ರಣಾಳಿಕೆ ಘೋಷಣೆ ಸಂದರ್ಭದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬುದು ಪರಮೇಶ್ವರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ತಮ್ಮ ಆಪ್ತರ ಬಳಿಯೂ ಬೇಸರ ಹೊರ ಹಾಕಿದ್ದಾರೆ ಎನ್ನಲಾಗಿದೆ.
ಇದನ್ನುಓದಿ :- ವಿಡಿಯೋ ಕಾಲ್ ಮಾಡಿ ಪತ್ನಿಯನ್ನು ತೋರಿಸಲಿಲ್ಲ ಎಂದು ಸಹೋದ್ಯೋಗಿ ಹೊಟ್ಟೆಗೆ ಇರಿದು ಕೊಲೆ…!