Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಪೇಜಾವರ ಶ್ರೀಗಳಿಗೆ ಪಿತೃ ವಿಯೋಗ

ಉಡುಪಿ : ಪೇಜಾವರ ಮಠದ ಮಠಾಧಿಪತಿಗಳಾದ ಶ್ರೀ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಪೂರ್ವಾಶ್ರಮದ ತಂದೆಯವರಾದ ಅಂಗಡಿಮಾರು ಕೃಷ್ಣಭಟ್ಟ ವಿಧಿವಶರಾಗಿದ್ದಾರೆ.

ವಯೋಸಹಜವಾದ ಆರೋಗ್ಯ ಸಮಸ್ಯೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷಿಕೆರೆಯಲ್ಲಿ ಶ್ರೀಗಳ ಪೂರ್ವಾಶ್ರಮದ ತಂದೆಯವರಾದ ಕೃಷ್ಣ ಭಟ್ಟರು ಕೊನೆಯುಸಿರೆಳೆದಿದ್ದಾರೆ. ಇವರು ಹಿರಿಯ ವಿದ್ವಾಂಸ, ತುಳು ಲಿಪಿ ತುಳು ಸೌರ ಪಂಚಾಂಗ ಕರ್ತೃ ಆಗಿದ್ದರು. ಶ್ರೀ ವಿಶ್ವಪ್ರಸನ್ನ ತೀರ್ಥರು ಸೇರಿದಂತೆ ಐವರು ಪುತ್ರರು, ಆರು ಪುತ್ರಿಯರು ಹಾಗೂ ಬಂಧು ವರ್ಗವನ್ನು ಕೃಷ್ಣ ಭಟ್ಟರು ಅಗಲಿದ್ದಾರೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!