Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!National & International News

ನಾಳೆ ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ

ಅಯೋಧ್ಯೆ : ನಾಳೆ ಅಯೋಧ್ಯೆಗೆಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ತೆರಳಲಿದ್ದಾರೆ. ಬಳಿಕ ಹಲವು ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡಲಿದ್ದಾರೆ.

2024ರ ಜನವರಿ 22 ರಂದು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಈ ನಿಟ್ಟಿನಲ್ಲಿ ಉದ್ಘಾಟನೆಗೂ ಮುನ್ನವೇ  ಪ್ರಧಾನಿ ನರೇಂದ್ರ ಮೋದಿಯವರು  11,100 ಕೋಟಿಯ ವಿವಿಧ ಯೋಜನೆಗಳ ಹಲವು ಕಾರ್ಯಕ್ರಮಗಳ ಉದ್ಘಾಟನೆಗಾಗಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ನಾಳಿನ ಪ್ರಧಾನಿ ಮೋದಿ ಕಾರ್ಯಕ್ರಮಗಳು :

ನಾಳೆ ಬೆಳಗ್ಗೆ 11:15ಕ್ಕೆ ರೈಲ್ವೆ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ 2 ಹೊಸ ಅಮೃತ್ ಭಾರತ್ ರೈಲುಗಳು ಮತ್ತು 6 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ನಂತರ ಅಯೋಧ್ಯೆ (Ayodhya) ನಗರದಲ್ಲಿ 4 ಹೊಸ ರಸ್ತೆಗಳನ್ನು ಉದ್ಘಾಟಿಸಲಿದ್ದಾರೆ.

ಇದಾದ ಬಳಿಕ ಅಯೋಧ್ಯೆಯಲ್ಲಿ ಗ್ರೀನ್‌ಫೀಲ್ಡ್ ಟೌನ್‌ಶಿಪ್‌ಗೆ ಅಡಿಗಲ್ಲು ಹಾಕಲಿದ್ದಾರೆ. ಇನ್ನು 12:15 ಕ್ಕೆ ವಿಮಾನ ನಿಲ್ದಾಣದ (Ayodhya Airport) ಉದ್ಘಾಟನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಯ ಬಳಿಕ ರೋಡ್ ಶೋ ನಡೆಸಲಿದ್ದಾರೆ. ವಿಮಾನ ನಿಲ್ದಾಣದಿಂದ ಅಯೋಧ್ಯೆ ನಗರದೊಳಗೆ ಒಟ್ಟು 15 ಕಿಮೀ ರೋಡ್ ಶೋ (Road Show) ನಡೆಯಲಿದೆ. ಬಳಿ ಅವರು ದೆಹಲಿಗೆ ವಾಪಸ್ಸಾಗಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!